Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ವೈಭವದ ದಸರಾ ಹಬ್ಬ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

10 ದಿನಗಳ ಸಡಗರದ ನಾಡಹಬ್ಬ ದಸರಾ2022ರ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ಸಿಕ್ಕಿದಂತಾಗಿದೆ

by Bengaluru Wire Desk
September 26, 2022
in News Wire, Video
Reading Time: 2 mins read
0

ಮೈಸೂರು, ಸೆ.26 www.bengaluruwire.com : ನಾಡಹಬ್ಬ ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಚಾಲನೆ ನೀಡಿದ್ದಾರೆ. ಇದೇ ಪ್ರಥಮ ಬಾರಿಗೆ ದೇಶದ ಪ್ರಥಮ ಪ್ರಜೆ ನವದಿನಗಳ ದಸರಾ ಹಬ್ಬಕ್ಕೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾಮರ್ ಚೆಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.

ಸೋಮವಾರ ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡುವ ಮೂಲಕ ನವದಿನಗಳ ದಸರಾ ಸಡಗರಕ್ಕೆ ಇಂಬು ನೀಡಿದಂತಾಗಿದೆ.

ಚಾಮುಂಡೇಶ್ವರಿ ಉತ್ಸವಮೂರ್ತಿ

ಮೈಸೂರು ಅರಮನೆಯಲ್ಲೂ ಖಾಸಗಿ ದರ್ಬಾರ್ ಸಡಗರ:
ಖಾಸಗಿ ದಸರಾಕ್ಕೂ ಅರಮನೆ ಸಿದ್ಧವಾಗಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ 9ನೇ ಬಾರಿಗೆ ಖಾಸಗಿ ದರ್ಬಾರ್ ಮುನ್ನಡೆಸುವರು. ಮೈಸೂರು ಒಡೆಯರ್ ಆಡಳಿತದ ಗತಕಾಲದ ವೈಭವವೂ ಗರಿಗೆದರಿದಂತಾಗಿದೆ.

ರಾಷ್ಟ್ರಪತಿ ದ್ರೌಪದಿ ದಸರಾ ಉದ್ಘಾಟನೆಯ ಯೂಟ್ಯೂಬ್ ವಿಡಿಯೋ

ಈ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಕಳೆದ ಎರಡು ವರ್ಷಗಳ ಕಾಲ ಸರಳವಾಗಿ ಆಚರಣೆ ಕಂಡಿದ್ದ ದಸರಾ ಹಬ್ಬಕ್ಕೆ ಈ ಬಾರಿ ವೈಭದ ಕಳೆ ಬಂದಿದೆ. ಇಡೀ ಮೈಸೂರು ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನಲೆಯಲ್ಲಿ ಬುಡಕಟ್ಟು ಸಮುದಾಯದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

ರಾತ್ರಿಯಾದಂತೆ ಮೈಸೂರಿನ ಅರಮನೆ, ಪ್ರಮುಖ ಬೀದಿಗಳು ದೀಪಾಲಂಕಾರದಿಂದ ಸಿಂಗಾರಗೊಳ್ಳಲು‌ ಮೈಸೂರು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಹೀಗಾಗಿ ಬೆಳಗಿಗಿಂತ ರಾತ್ರಿಯಲ್ಲಿ ಮೈಸೂರಿನ ಸೊಬಗನ್ನು ನೋಡುವುದೇ ಕಣ್ಣಿಗೆ ಹಬ್ಬ. ಈ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ದೇಶ- ವಿದೇಶಗಳ ಪ್ರವಾಸಿಗರು ಮೈಸೂರು ಹಾಗೂ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದಸರಾ ಹಬ್ಬದ ಆಚರಣೆಯಲ್ಲಿ ಯುವ ದಸರಾ, ರೈತ ದಸರಾ, ಮಕ್ಕಳ ದಸರಾ, ದಸರಾ ವಸ್ತುಪ್ರದರ್ಶನ,ಆಹಾರ ಮೇಳ, ದಸರಾ ಸಾಂಸ್ಕೃತಿಕ ಕಾರ್ಯಕ್ರಮ, ದಸರಾ ಕ್ರೀಡಾಕೂಟ, ಕುಸ್ತಿ, ಫಲಪುಷ್ಪ ಪ್ರದರ್ಶನ ಸೇರಿದಂತೆ 20ಕ್ಕೂ ಹೆಚ್ಚು ಕಾರ್ಯಕ್ರಮಗಳು ಸೋಮವಾರದಿಂದಲೇ ಆರಂಭವಾಗಿದೆ. ಇದರಿಂದ ಮೈಸೂರಿನಲ್ಲಿ ಸಾಲು ಸಾಲು ದಸರಾ ಚಟುವಟಿಕೆಗಳು ಅನಾವರಣಗೊಂಡು, 10 ದಿನಗಳ ಕಾಲ ಹಬ್ಬದ ನವೋಲ್ಲಾಸ ಕಳೆಗಟ್ಟಿದಂತಾಗಿದೆ.

ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ

ನಾಡಹಬ್ಬ ಸಾಂಸ್ಕೃತಿಕ ಕಾರ್ಯಕ್ರಮ ಹಿರಿಮೆಯೇ ಹಾಗೆ: ದಸರಾದ ವೈಶಿಷ್ಟ್ಯದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿವಿಧ ಕಲಾವಿದರುಗಳಿಂದ ಅರಮನೆ ಅಂಗಳದಲ್ಲಿ ನಿತ್ಯ ಸಂಜೆ ನಡೆಯಲಿದೆ. ಜಗನ್ಮೋಹನ ಅರಮನೆ, ಕಲಾಮಂದಿರ, ಗಾನಭಾರತಿ, ನಾದಬ್ರಹ್ಮ, ಕಿರು ರಂಗಮಂದಿರ, ಚಿಕ್ಕಗಡಿಯಾರ ಹಾಗೂ ಪುರಭವನ ವೇದಿಕೆಯಲ್ಲೂ ಹಲವು ವಿವಿಧ ವಿಭಿನ್ನ ವಿಶಿಷ್ಟ ಕಾರ್ಯಕ್ರಮಗಳು ಜರುಗಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬೆಳ್ಳಿಯ ಚಾಮುಂಡೇಶ್ವರಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಯಿತು.

ಯುವ ದಸರಾದಲ್ಲಿ ಮಂಗ್ಲಿ ಮಿಂಚು: ಯುವ ಮನಸ್ಸುಗಳನ್ನು ಹುಚ್ಚೆದ್ದು ಕುಣಿಸುವ ‘ಯುವ ದಸರಾ’ ಸೆ.27ರಿಂದ ಏಳು ದಿನಗಳ ಕಾಲ ವರ್ಣರಂಜಿತವಾಗಿ ನಡೆಯಲಿದೆ. ತೆಲುಗಿನ ಜನಪ್ರಿಯ ಗಾಯಕಿ ಮಂಗ್ಲಿ, ಬಾಲಿವುಡ್ ಗಾಯಕರಾದ ಕನ್ನಿಕಾ ಕಪೂರ್, ಅಮಿತ್ ತ್ರಿವೇದಿ ಮತ್ತು ಸುನಿಧಿ ಚೌಹಾಣ್ ಸಂಗೀತದ ಹೊನಲು ಹರಿಸಲಿದ್ದಾರೆ. ಗಾಯಕರಾದ ರಘು ದೀಕ್ಷಿತ್, ಡಾ.ಶಮಿತಾ ಮಲ್ನಾಡ್ ಸಹ ತಮ್ಮ ಸಂಗೀತ ಸ್ವಾದ ಉಣಬಡಿಸಲಿದ್ದಾರೆ.

ಕುಸ್ತಿ ಅಖಾಡದಲ್ಲಿ ಸಾಕ್ಷಿ ಮಲ್ಲಿಕ್ : ಕುಸ್ತಿ ಕಾಳಗಕ್ಕೆ ಈ ಬಾರಿ ಖ್ಯಾತ ಕುಸ್ತಿಪಟು ಸಾಕ್ಷಿ ಮಲ್ಲಿಕ್ ವಿಶೇಷ ಆಹ್ವಾನಿತರಾಗಿದ್ದು, ಪಂಜಕುಸ್ತಿ ಟೂರ್ನಿಯೂ ಇದೆ.

ದಸರಾಗೆ ಖಾಕಿ ಭದ್ರತೆ: ದಸರಾಗೆ 5,485 ಪೊಲೀಸರನ್ನು ಬಂದೋಬಸ್ತ್​ಗೆ ನಿಯೋಜಿಸಲಾಗಿದೆ. ಜತೆಗೆ, ಸಿಸಿಟಿವಿ ಕ್ಯಾಮರಾ, ಡ್ರೋನ್ ಕ್ಯಾಮರಾ, ಬಾಡಿ ವೋರ್ನ್ ಕ್ಯಾಮರಾ ಮೂಲಕ ಕಣ್ಗಾವಲು ಇಟ್ಟಿದ್ದು, ಮೈಸೂರಿನೆಲ್ಲಡೆ ಭಿಗಿಭದ್ರತೆ ಒದಗಿಸಲಾಗಿದೆ.

ದಸರೆಯಲ್ಲೂ ಯುವರತ್ನ ಪುನೀತ್ ನೆನಪು : ದಿವಂಗತ ಪುನೀತ್ ರಾಜ್​ಕುಮಾರ್​ ನೆನಪಿನಲ್ಲಿ ದಸರಾದಲ್ಲಿ ಈ ಬಾರಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಲನಚಿತ್ರೋತ್ಸವದಲ್ಲೂ ‘ಅಪ್ಪು ದಿನ’ ಏರ್ಪಡಿಸಲಾಗಿದೆ. ನಟ ಪುನೀತ್ ರಾಜ್ ಕುಮಾರ್ ಅವರ ಆರು ಸಿನಿಮಾಗಳನ್ನು ತೋರಿಸಲಾಗುತ್ತಿದೆ. ದೀಪಾಲಂಕಾರದಲ್ಲಿ ಪವರ್​ಸ್ಟಾರ್​ಗೆ ಬೆಳಕಿನ ರೂಪಕ ನೀಡಿದ್ದರೆ, ಫಲಪುಷ್ಪ ಪ್ರದರ್ಶನದಲ್ಲೂ ‘ಯುವರತ್ನ’ನಿಗೆ ಹೂವಿನ ಸಿಂಗಾರ ಮಾಡಲಾಗಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಅ.1ರಿಂದ ವಿದ್ಯುತ್ ದರ ಹೆಚ್ಚಳ ಹಿನ್ನಲೆ ; ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುತ್ತಿದೆ’ ಬಿಜೆಪಿ – ಎಚ್ ಡಿಕೆ ಟೀಕೆ

Next Post

ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಿಗದ ಮನ್ನಣೆ – ವ್ಯಾಪಕ ಆಕ್ರೋಶ

Next Post

ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಿಗದ ಮನ್ನಣೆ - ವ್ಯಾಪಕ ಆಕ್ರೋಶ

ಉಡುಪಿಯ ಶ್ರೀ ಕುರ್ಡುಂಜೆ ಮಠದಲ್ಲಿ 22ನೇ ವರ್ಷದ ನವರಾತ್ರಿ ಮಹೋತ್ಸವ ಆರಂಭ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group