Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Air Pollution Contributes To Lung Cancer | ವಾಯು ಮಾಲಿನ್ಯದಿಂದ ಶ್ವಾಸಕೋಶದ ಕ್ಯಾನ್ಸರ್ ಅಪಾಯ ಹೆಚ್ಚು : ನೂತನ ಸಂಶೋಧನೆಯಿಂದ ಬಹಿರಂಗ

ವಿಶ್ವ ಆರೋಗ್ಯ ಸಂಸ್ಥೆ ವಾರ್ಷಿಕವಾಗಿ ನಿಗಧಿಪಡಿಸಿರುವ ಮೌಲ್ಯಕ್ಕಿಂತ 11.5 ಪಟ್ಟು ಹೆಚ್ಚು ವಾಯು ಮಾಲಿನ್ಯ ಭಾರತದಲ್ಲಿದೆ.

by Bengaluru Wire Desk
October 17, 2022
in Bengaluru Focus, Public interest
Reading Time: 1 min read
0
ಶ್ವಾಸಕೋಶದ ಗ್ರಾಫಿಕ್ ಚಿತ್ರ

ಶ್ವಾಸಕೋಶದ ಗ್ರಾಫಿಕ್ ಚಿತ್ರ

ವಾಯು ಮಾಲೀನ್ಯವು ಮನುಷ್ಯನ ಶ್ವಾಸಕೋಶದ ಕ್ಯಾನ್ಸರ್ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಹೊಸ ಅಧ್ಯಯನವೊಂದು ಬಹಿರಂಗಪಡಿಸಿದೆ. ಇದು ವಿಶ್ವದಲ್ಲೇ ಅತಿಹೆಚ್ಚು ವಾಯು ಮಾಲಿನ್ಯವಿರುವ ಭಾರತ ದೇಶಕ್ಕೆ ಅದಲ್ಲೂ ಅತಿಹೆಚ್ಚು ವಾಯುಮಾಲಿನ್ಯ ಪ್ರಮಾಣವಿರುವ ಬೆಂಗಳೂರಿಗೆ ಒಂದು ದೊಡ್ಡ ಅಲಾರಾಮ್ ಅಂತಲೇ ಹೇಳಬಹುದು.

ಐಕ್ಯೂಏರ್.ಕಾಮ್ ಎಂಬ ಸಂಸ್ಥೆಯು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದಂತೆ 2021ರಲ್ಲಿ ವಿಶ್ವದಲ್ಲೇ 118 ರಾಷ್ಟ್ರಗಳ ಪೈಕಿ ಅತಿಹೆಚ್ಚು ಕಳಪೆ ಗುಣಮಟ್ಟದ ಗಾಳಿಯಿರುವ ರಾಷ್ಟ್ರಗಳ ಪೈಕಿ ಭಾರತ 5ನೇ ಸ್ಥಾನ ಪಡೆದಿತ್ತು. ವಿಶ್ವ ಆರೋಗ್ಯ ಸಂಸ್ಥೆ ವಾರ್ಷಿಕವಾಗಿ ನಿಗಧಿಪಡಿಸಿರುವ ಮೌಲ್ಯಕ್ಕಿಂತ 11.5 ಪಟ್ಟು ಹೆಚ್ಚು ವಾಯು ಮಾಲಿನ್ಯ ಭಾರತದಲ್ಲಿದೆ ಕಂಡು ಬಂದಿತ್ತು ಎಂದು ತಿಳಿಸಿದೆ.

ಪರಿಸ್ಥಿತಿ ಹೀಗಿರುವಾಗ, ವಾಯು ಮಾಲಿನ್ಯದ ಕುರಿತು ಇತ್ತೀಚೆಗೆ ದಿ ಲ್ಯಾನ್ಸೆಟ್‌ ಜರ್ನಲ್ (The Lancet) ನಲ್ಲಿ ಪ್ರಕಟವಾದ ಸಂಶೋಧನಾ ಅಧ್ಯಯನವು ಗ್ರಂಥಿ ವಿಜ್ಞಾನ (Oncology) ಕ್ಷೇತ್ರಕ್ಕೆ ಉತ್ತಮ ಭರವಸೆಯನ್ನು ನೀಡಿದೆ. ಫ್ರಾನ್ಸಿಸ್ ಕ್ರಿಕ್ ಇನ್ಸ್ಟಿಟ್ಯೂಟ್ ಮತ್ತು ಯೂನಿವರ್ಸಿಟಿ ಕಾಲೇಜ್ ಲಂಡನ್ ಸಂಶೋಧಕರು ಶ್ವಾಸಕೋಶದ ಕ್ಯಾನ್ಸರ್ ವಿಕಸನವನ್ನು ಕಾಲಾನಂತರದಲ್ಲಿ ಅಧ್ಯಯನ ಮಾಡಿದರು. ಈ ಅಧ್ಯಯನ ಮಾಡಿದಾಗ, ಧೂಮಪಾನಿಗಳಲ್ಲದ ಅಂದಾಜು 6,000 ಮಂದಿ ಪ್ರತಿ ವರ್ಷ ಬ್ರಿಟನ್ ನಲ್ಲಿ ಶ್ವಾಸಕೋಶದ ಕ್ಯಾನ್ಸರ್ ನಿಂದ ಸಾಯುತ್ತಿದ್ದಾರೆ. ಈ ಕ್ಯಾನ್ಸರ್ ರೋಗದ ಪ್ರತಿ ಹತ್ತು ಪ್ರಕರಣಗಳಲ್ಲಿ ಒಂದು ಪ್ರಕರಣ, ಗಾಳಿಯಿಂದ ಸಂಭವಿಸಿದ ರೋಗವಾಗಿದೆ.

ವಾಯು ಮಾಲಿನ್ಯದ ವಾತಾವರಣದಲ್ಲಿ ಸಾಗುತ್ತಿರುವ ವಾಹನಗಳು (ಸಾಂದರ್ಭಿಕ ಚಿತ್ರ)

ಮನುಷ್ಯನಿಗೆ ವಯಸ್ಸಾಗುತ್ತಿದ್ದಂತೆ ಕ್ಯಾನ್ಸರ್ ಉಂಟುಮಾಡುವ ರೂಪಾಂತರಗೊಂಡ ಜೀವಕೋಶಗಳು ಸ್ವಾಭಾವಿಕವಾಗಿ ದೇಹದಲ್ಲಿ ಸಂಗ್ರಹಗೊಳ್ಳುತ್ತವೆ. ಆದರೆ ಇವು ಸಾಮಾನ್ಯವಾಗಿ ನಿಷ್ಕ್ರಿಯವಾಗಿರುತ್ತವೆ. ವಾಯು ಮಾಲಿನ್ಯವು ಶ್ವಾಸಕೋಶದಲ್ಲಿ ಈ ಕೋಶಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಅವುಗಳ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಇವುಗಳು ಗಡ್ಡೆಗಳ ರೂಪದಲ್ಲಿ ಹರಡುತ್ತದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ವಾತಾವರಣದಲ್ಲಿ ತೇಲಲ್ಪಡುವ ಸಣ್ಣ ಧೂಳಿನ ಕಣಗಳು (PM2•5) ಉಸಿರಾಟದ ಮೂಲಕ ಶ್ವಾಸಕೋಶದಲ್ಲಿ ಎಚ್ಚರಿಕೆಯ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ. ಅಲ್ಲದೆ ಕ್ಯಾನ್ಸರ್ ಉಂಟುಮಾಡುವ ರೂಪಾಂತರಗಳನ್ನು ಹೊಂದಿರುವ ಸುಪ್ತ ಕೋಶಗಳನ್ನು ಉರಿಯೂತಗೊಳಿಸುತ್ತದೆ ಮತ್ತು ಸಕ್ರಿಯಗೊಳಿಸುತ್ತದೆ. ಈ ಊಹೆಯನ್ನು ಪರೀಕ್ಷಿಸಲು,  ಸಂಶೋಧಕರು ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ಕಂಡುಬರುವ ವಾಯು ಮಾಲಿನ್ಯದ ಸಾಂದ್ರತೆಗಳ ರೀತಿಯ EGFR (ಕ್ಯಾನ್ಸರ್ ಕಾರಕ ಪ್ರೊಟಿನ್) ರೂಪಾಂತರಿತ ಕೋಶಗಳೊಂದಿಗೆ ಇಲಿಗಳನ್ನು ಪರೀಕ್ಷೆಗೆ ಒಳಪಡಿಸಿದರು.

ಈ ವಾಯುಮಾಲಿನ್ಯದ ಪರಿಸ್ಥಿತಿಗೆ ಒಳಪಡಿಸದ ಇಲಿಗಳಿಗಿಂತ, ಮಾಲಿನ್ಯಕ್ಕೆ ತೆರೆದುಕೊಂಡ ಇಲಿಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ಅವರ ಸಂಶೋಧನೆಗಳು ತಿಳಿಯಪಡಿಸಿತು. ಈ ಸಂಶೋಧನೆಯು ಸಾರ್ವತ್ರಿಕ ಪ್ರಸ್ತುತತೆಯನ್ನು ಹೊಂದಿದೆ.  ಏಕೆಂದರೆ ಪ್ರಪಂಚದ ಹೆಚ್ಚಿನ ಜನಸಂಖ್ಯೆಯು PM2•5 ಗಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ಯ ವಾರ್ಷಿಕ ಮಿತಿಗಳನ್ನು ಮೀರಿದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ.

ಇದಲ್ಲದೆ, ತಮ್ಮ ಸಂಶೋಧನಾ ಫಲಿತಾಂಶಗಳು ಇತರ ರೀತಿಯ ಕ್ಯಾನ್ಸರ್‌ಗಳಿಗೂ ಅನ್ವಯಿಸಬಹುದು ಎಂದು ತಂಡವು ವಾದಿಸಿದೆ. ಒಂದು ಪಿಎಂ2.5 ಧೂಳಿನ ಕಣವು 40 ಕೋವಿಡ್ ವೈರಸ್ ಗಳಿಗೆ ಸಮ ಎಂದು ಹೇಳುತ್ತಾರೆ ಕ್ಯಾನ್ಸರ್ ತಜ್ಞರು. ಈ ಮಹತ್ವದ ಸಂಶೋಧನಾ ಅಧ್ಯಯನವು ಧೂಮಪಾನಿಗಳಲ್ಲದವರ ಕ್ಯಾನ್ಸರ್ ಚಿಕಿತ್ಸೆಗೆ ಹೊಸ ವಿಧಾನಗಳಿಗೆ ದಾರಿ ಮಾಡಿಕೊಟ್ಟಿದೆ. ಮಾತ್ರವಲ್ಲದೆ ಜಗತ್ತಿನಾದ್ಯಂತ ವಾಯುಮಾಲಿನ್ಯದ ಗಂಭೀರ ಏರಿಕೆಯನ್ನು ತಡೆಯುವ ತೀವ್ರ ಅಗತ್ಯವನ್ನು ಎತ್ತಿ ತೋರಿಸಿದೆ.

“ಫ್ರಾನ್ಸಿಸ್ ಕ್ರಿಕ್ ಇನ್ಸಿಟ್ಯೂಟ್ ಹಾಗೂ ಯೂನಿರ್ವಸಿಟಿ ಕಾಲೇಜ್ ಲಂಡನ್ ಸಂಶೋಧಕರು ವಾಯುಮಾಲಿನ್ಯ ಶ್ವಾಸಕೋಶ ಕ್ಯಾನ್ಸರ್ ಬರುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದೆ. ಹೀಗಾಗಿ ಬಂಡವಾಳಶಾಹಿ ಹಾಗೂ ಕೈಗಾರಿಕರಣದಿಂದಾಗಿ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವಿವಿಧ ರೀತಿಯ ಮಾಲಿನ್ಯಗಳು ಹೆಚ್ಚಾಗಿ ಮನುಷ್ಯನ ಆರೋಗ್ಯವು ಹದಗೆಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರ ಸಂಸ್ಥೆಗಳು ಬೇರೆ ಬೇರೆ ಸಂದರ್ಭದಲ್ಲಿ ಹೇಳಿರುವಂತೆ ವಾತಾವರಣದಲ್ಲಿ ಮಾಲಿನ್ಯವನ್ನು ನಿಯಂತ್ರಣ ಮಾಡದೇ ಹೋದರೆ ಮೂವರಲ್ಲಿ ಒಬ್ಬರಿಗೆ ಕ್ಯಾನ್ಸರ್ ರೋಗ ಬರಬಹುದು. ಹಾಗಾಗಿ ಎಲ್ಲಾ ರೀತಿಯ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಬೆಂಗಳೂರಿನ ವಾಯುಮಾಲಿನ್ಯ ಪರಿಸ್ಥಿತಿಯೂ ಗಂಭೀರವಾಗಿದೆ.”

  • ಡಾ.ವಿಶಾಲ್ ರಾವ್, ಡೀನ್, ಎಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆ
WhatsApp Join our WhatsApp Channel
Previous Post

#AssemblyElection | ಬೀಳಗಿ ಕ್ಷೇತ್ರ ಬಿಟ್ಟು ನಾನೆಲ್ಲೂ ಹೋಗಲ್ಲ : ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

Next Post

Defence News | 2600 ಕಿ.ಮೀ ಮೋಟಾರ್ ಸೈಕಲ್ ಯಾತ್ರೆ ಪೂರ್ಣಗೊಳಿಸಿದ ಸೇನೆಯ ಟೋರ್ನಡೋಸ್ ತಂಡ

Next Post

Defence News | 2600 ಕಿ.ಮೀ ಮೋಟಾರ್ ಸೈಕಲ್ ಯಾತ್ರೆ ಪೂರ್ಣಗೊಳಿಸಿದ ಸೇನೆಯ ಟೋರ್ನಡೋಸ್ ತಂಡ

BBMP NEWS | ಬಿಬಿಎಂಪಿ ಮುಖ್ಯ ಆಯುಕ್ತರಿಂದ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಕಾಲ್ನಡಿಗೆಯ ಮುಖಾಂತರ ಸಮಸ್ಯೆಗಳ ಖುದ್ದು ಪರಿವೀಕ್ಷಣೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group