Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

ಜಿಮ್‌ಗೆ ದಿನ ಎಣಿಕೆ ಆರಂಭ, ನವೆಂಬರ್‌ 2 ರಿಂದ 4ರವರೆಗೆ ಸಮಾವೇಶ | ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ಮೋದಿ ಅವರಿಂದ ಸಮಾವೇಶ ಉದ್ಘಾಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರೋಡ್‌ಶೋ ಯಶಸ್ವಿ | . 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ

by Bengaluru Wire Desk
October 20, 2022
in News Wire
Reading Time: 1 min read
0
ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಅ.20 www.bengaluruwire.com : ಬರುವ ತಿಂಗಳ ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ (GIM)ಕ್ಕೆ ಎಲ್ಲ ರೀತಿಯ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರು ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಿರಾಣಿ, ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಮಾವೇಶವನ್ನು ಉದ್ಘಾಟನೆ ಮಾಡಿ ಮಾತನಾಡಲಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,  ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭಗವಂತ ಖೂಬಾ,  ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ ಎಂದರು.

“ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ  ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ರೋಡ್‌ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ.  ದಿಲ್ಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್‌ ಹಾಗೂ ಮುಂಬಯಿ ರೋಡ್‌ ಶೋ ವೇಳೆ ಉದ್ಯಮಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ.  ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕಾ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿತ್ತು. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ,”ಎಂದು ಅವರು ತಿಳಿಸಿದರು.

” ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ  ‘ಬಿಲ್ಡ್‌ ಫಾರ್‌ ದ ವರ್ಲ್ಡ್‌’ (Build For The World) ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ,”ಎಂದು ಸಚಿವ ನಿರಾಣಿ ಅಭಿಪ್ರಾಯಪಟ್ಟರು.

ಲ್ಯಾಂಡ್‌ ಬ್ಯಾಂಕ್‌ :

“ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ”ಎಂದು ಸಚಿವರು ತಿಳಿಸಿದರು. 

 ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಕರ್ನಾಟಕ ಮುಂದು :

ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್‌ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ.  2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ ಎಂದು ಸಚಿವರು ತಿಳಿಸಿದರು.

 ಗ್ರೀನ್ ಹೈಡ್ರೋಜನ್, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ನವೀಕರಿಸಬಹುದಾದ ಇಂಧನಗಳು, ಏರೋಸ್ಪೇಸ್ ಮತ್ತು ಡಿಫೆನ್ಸ್, ಇ-ಮೊಬಿಲಿಟಿ ಮತ್ತು ಮೂಲಸೌಕರ್ಯಗಳಂತಹ ವಲಯಗಳಲ್ಲಿ  4 ಲಕ್ಷ ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಒಪ್ಪಂದ ಏರ್ಪಟ್ಟಿದೆ ಎಂದರು.

WhatsApp Join our WhatsApp Channel
Previous Post

Bangalore Pothole Protest | ಬೆಂಗಳೂರಿನ ರಸ್ತೆಗುಂಡಿಗಳಲ್ಲಿ ಮಂತ್ರಿ- ಸಂಸದರ ಫೊಟೋ ಇಟ್ಟು ವಿಶಿಷ್ಟ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Next Post

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

Next Post
ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿರುವ ಚಿತ್ರ

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ - ಇಲ್ಲಿದೆ Live ವಿಡಿಯೋ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group