Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#GIMKarnataka2022 | ಬಂಡವಾಳ ಹೂಡಿಕೆದಾರರ ಸಮಾವೇಶದ ಹೆಸರಿನಲ್ಲಿ ಬೆಂಗಳೂರು ಆಗುತ್ತಾ ಫಳ ಫಳ…!??

ದೇಶ- ವಿದೇಶಗಳ ಹೂಡಿಕೆದಾರರು ಜಿಮ್ ಸಮಾವೇಶಕ್ಕೆ ಆಗಮಿಸುವ ಹಿನ್ನಲೆಯಲ್ಲಿ ನಗರದ ರಸ್ತೆ, ಪಾದಚಾರಿ ಮಾರ್ಗ, ರೋಡ್ ಮೀಡಿಯನ್ ಗಳನ್ನು ಸುಸ್ಥಿತಿಯಲ್ಲಿಡಲು ಪಾಲಿಕೆ ನಿರ್ಧರಿಸಿದೆ.

by Bengaluru Wire Desk
October 27, 2022
in Bengaluru Focus
Reading Time: 2 mins read
0

ಬೆಂಗಳೂರು, ಅ.27 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇದೇ ನವೆಂಬರ್ 2, 3 ಹಾಗೂ 4 ರಂದು ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ(Global Investors Meet) ನಡೆಯಲಿದೆ. ಹೀಗಾಗಿ ದೇಶ- ವಿದೇಶಗಳ ಹೂಡಿಕೆದಾರರು ಆಗಮಿಸುವ ಹಿನ್ನಲೆಯಲ್ಲಿ ನಗರದ ರಸ್ತೆ, ಪಾದಚಾರಿ ಮಾರ್ಗ, ರೋಡ್ ಮೀಡಿಯನ್ ಗಳನ್ನು ಸುಸ್ಥಿತಿಯಲ್ಲಿಡಲು ಪಾಲಿಕೆ ನಿರ್ಧರಿಸಿದೆ.

ವಿವಿಧ ದೇಶಗಳ ಹೂಡಿಕೆದಾರರ ಮುಂದೆ ನಗರದ ಮಾನ ಕಾಪಾಡಲು ಬಿಬಿಎಂಪಿ ಅಧಿಕಾರಿಗಳು ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ತೀವ್ರ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದಾರೆ.

ಬೆಂಗಳೂರು ನಗರದ ಸ್ವಚ್ಛತೆ ಹಾಗೂ ಸೌಂದರ್ಯೀಕರಣದ ಬಗ್ಗೆ ಹೆಚ್ಚಿನ ಒತ್ತು ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಕೆಳಹಂತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅದರಂತೆ ಪಾಲಿಕೆಯ 8 ವಲಯಗಳಲ್ಲೂ ವಲಯ ಆಯುಕ್ತರುಗಳ ನೇತೃತ್ವದಲ್ಲಿ ತೀವ್ರ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಫುಟ್ ಪಾತ್ ಸ್ವಚ್ಛತೆ

ಅದರಂತೆ, ನಗರದಾದ್ಯಂತ ರಸ್ತೆಗಳ ಡಾಂಬರೀಕರಣ, ರಸ್ತೆ ಗುಂಡಿಗಳನ್ನು ಮುಚ್ಚುವುದು, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ರಸ್ತೆ ಬದಿ ಬಿದ್ದಿರುವ ತ್ಯಾಜ್ಯ ಅಥವಾ ಕಟ್ಟಡ ಭಗ್ನಾವಶೇಷಗಳ ತೆರವುಗೊಳಿಸಲಾಗುತ್ತಿದೆ. ರಸ್ತೆ ಬದಿಯಿರುವ ಮರಗಳ ಕೊಂಬೆಗಳನ್ನು ಕಟಾವು ಮಾಡುವುದು, ಫ್ಲೆಕ್ಸ್ ಗಳ ತೆರವು, ಬೀದಿ ದೀಪಗಳನ್ನು ಸರಿಪಡಿಸುವುದು. ಪ್ರಮುಖ ರಸ್ತೆ ಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ಮೀಡಿಯನ್ ಗಳ ಅಭಿವೃದ್ಧಿಪಡಿಸಿ ಸುಂದರ ಸಸಿಗಳನ್ನು ನೆಡಲಾಗುತ್ತಿದೆ.

ಮುಖ್ಯ ಆಯುಕ್ತರಿಂದ ವಿವಿಧ ಸ್ಥಳಗಳ ಪರಿಶೀಲನೆ :
ಬಿಬಿಎಂಪಿಯ 8 ವಲಯ ಆಯುಕ್ತರುಗಳ ನೇತೃತ್ವದಲ್ಲಿ ಪ್ರತಿದಿನ ನಿಗದಿತ ಸ್ಥಳಗಳನ್ನು ಗುರುತಿಸಿಕೊಂಡು ತೀವ್ರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಪೈಕಿ ನಗರದ ಪೂರ್ವ ವಲಯದ ಹೆಬ್ಬಾಳ ರಸ್ತೆ, ಮೇಕ್ರಿ ವೃತ್ತ, ಜಯಮಹಲ್ ರಸ್ತೆ, ದಕ್ಷಿಣ ವಲಯದ ಬನಶಂಕರಿ ವೃತ್ತ, ಕನಕಪುರ ರಸ್ತೆ, ಬೊಮ್ಮನಹಳ್ಳಿ ವಲಯದ ಕನಕಪುರ ಮುಖ್ಯ ರಸ್ತೆ, ಚುಂಚನಘಟ್ಟ ಮುಖ್ಯ ರಸ್ತೆ ಹಾಗೂ ಕೋಣನಕುಂಟೆ ರಸ್ತೆಯ ವಿವಿಧ ಸ್ಥಳಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮೇಲಿನ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಡಾಂಬರೀಕರಣ, ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ, ಪಾದಚಾರಿ ಮಾರ್ಗ ಅಭಿವೃದ್ಧಿ ಹಾಗೂ ರಸ್ತೆ ಬದಿಯ ಚರಂಡಿಗಳ ಸ್ವಚ್ಛತೆ ಮಾಡಲು ನಿರ್ದೇಶನ ನೀಡಿದರು.

ರಸ್ತೆ ಬದಿಯಲ್ಲಿನ ತ್ಯಾಜ್ಯ ತೆಗೆಯುತ್ತಿರುವ ಕೂಲಿ ಕಾರ್ಮಿಕರು

ಆಯಾ ವಲಯ ವ್ಯಾಪ್ತಿಯ ವಲಯ ಆಯುಕ್ತರು ವಲಯದ ತಂಡದ ಜೊತೆ ಪ್ರತಿನಿತ್ಯ ಬೇರೆ ಬೇರೆ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಬೇಕು. ಜೊತೆಗೆ ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳು ರಸ್ತೆಗಳನ್ನು ಅಗೆದಿರುವ ಕಡೆ ಪಾಲಿಕೆ ಅಧಿಕಾರಿಗಳು ಸಮನ್ವಯ ಮಾಡಿಕೊಂಡು ಕೂಡಲೆ ದುರಸ್ತಿಪಡಿಸುವ ಕೆಲಸ ಮಾಡಲು ಸೂಚನೆ ನೀಡಿದರು.

ಆಡಳಿತಗಾರರು – ಮುಖ್ಯ ಆಯುಕ್ತರು ವಾರ್ಡ್ ರಸ್ತೆ ಗಮನಿಸಿಲ್ಲ ಏಕೆ?

ಗುಂಡಿಮಯ ರಸ್ತೆಯ ವೃತ್ತದಲ್ಲಿ‌ ನಿಂತಿರುವ ರಾಜರಾಜೇಶ್ವರಿ ನಗರ ವಲಯ ಆಯುಕ್ತರಾದ ಡಾ.ರಾಮಪ್ರಸಾತ್ ಮನೋಹರ್ ಹಾಗೂ ಸಿಇ ವಿಜಯ್ ಕುಮಾರ್

ಬೆಂಗಳೂರಿನಲ್ಲಿ 90 ಸಾವಿರಕ್ಕೂ ಹೆಚ್ಚು ರಸ್ತೆಗಳಿದ್ದು ಬಹುತೇಕ ವಾರ್ಡ್ ಗಳ ರಸ್ತೆಗಳು ಕುಲಗೆಟ್ಟು ಕೂತಿವೆ. 243 ವಾರ್ಡ್ ಗಳ ಪೈಕಿ ಬಹುತೇಕ ರಸ್ತೆಗಳು ಹಾಳಾಗಿವೆ. ವಾರ್ಡ್ ರಸ್ತೆ ಅಭಿವೃದ್ಧಿಯಾಗದೆ ಬಹಳ ಕಾಲ ಆಗಿವೆ. ರಸ್ತೆ ಬದಿ ಕಸ ಹಾಕುವ ಪರಿಪಾಟಕ್ಕೆ ಲಗಾಮು ಬಿದ್ದಿಲ್ಲ. ಬೀದಿ ದೀಪ ಹಲವು ಕಡೆ ಹಾಳಾಗಿದೆ. ಇವುಗಳ ಬಗ್ಗೆ ಪಾಲಿಕೆ ಆಡಳಿತಗಾರರು, ಮುಖ್ಯ ಆಯುಕ್ತರು ಗಮನಹರಿಸಲು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡುತ್ತಿಲ್ಲ ಏಕೆ? ಎಂದು ನಗರದ ನಾಗರೀಕರು, ಕ್ಷೇಮಾಭಿವೃದ್ಧಿ ಸಂಘದವರು ಪ್ರಶ್ನಿಸುತ್ತಿದ್ದಾರೆ.

ಪ್ರಮುಖ ರಸ್ತೆ ವಿಭಜಕಗಳ ಅಭಿವೃದ್ಧಿ:
ಪಾಲಿಕೆ ತೋಟಗಾರಿಕೆ ವಿಭಾಗದಿಂದ ನಗರದ ಪ್ರಮುಖ ರಸ್ತೆ ಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ಮೀಡಿಯನ್ ಗಳ ಅಭಿವೃದ್ಧಿ ಹಾಗೂ ಸುಂದರ ಸಸಿಗಳನ್ನು ನಡೆಲಾಗುತ್ತಿದೆ ಎಂದು ಬಿಬಿಎಂಪಿ‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಗಡಿಬಿಡಿಯಲ್ಲಿ ಫುಟ್ ಪಾತಲ್ಲಿ ಗಿಡ ನೆಟ್ಟಿರುವ ಪಾಲಿಕೆ

ಅದರಂತೆ ಬಳ್ಳಾರಿ ರಸ್ತೆ, ಸಿ.ವಿ ರಾಮನ್ ರಸ್ತೆ, ಭಾಷ್ಯಂ ವೃತ್ತ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ, ಜಯನಗರ ಮುಖ್ಯ ರಸ್ತೆ, ಪ್ಯಾಲೆಸ್ ರಸ್ತೆ, ರಾಜಾಜಿನಗರ ಮೇಲುಸೇತುವೆ, ಸುಭೇದಾರ್ ಚತ್ರಂ ರಸ್ತೆ, ಮೆಜೆಸ್ಟಿಕ್ ರಸ್ತೆ, ಕೆ.ಆರ್.ರಸ್ತೆ, ಮೈಸೂರು ಬ್ಯಾಂಕ್ ರಸ್ತೆ, ಜೆ.ಪಿ ನಗರ ರಸ್ತೆ, ಗೊರಗುಂಟೆಪಾಳ್ಯ ರಸ್ತೆ, ಜಕ್ಕೂರು ರಸ್ತೆ, ಜಿಕೆವಿಕೆ ರಸ್ತೆ, ಹೆಬ್ಬಾಳ-ಬಿಇಎಲ್ ರಸ್ತೆ, ಎಂಎಸ್ ಪಾಳ್ಯ ರಸ್ತೆ, ದೊಡ್ಡಬಳ್ಳಾಪುರ ಮಾರ್ಗದ ರಸ್ತೆ ಮಿಡಿಯನ್ ಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಜಿಮ್ ಸಮಾವೇಶದ ನಂತರ ಬಯಲಾಗುವುದೇ ಪಾಲಿಕೆ ಬಂಡವಾಳ? :
ನಗರದ ಪ್ರಮುಖ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆ ಮಧ್ಯದ ರಸ್ತೆವಿಭಜಕ ಅಭಿವೃದ್ಧಿ ಪಡಿಸಿ ಗಡಿಬಿಡಿಯಲ್ಲಿ ಸಸಿಗಳನ್ನೇನೊ ಹಾಕಿದ್ದಾರೆ. ಬಂಡವಾಳ ಹೂಡಿಕೆದಾರರು ಓಡಾಡುವ ರಸ್ತೆಗಳಲ್ಲಿನ ರಸ್ತೆಗುಂಡಿ ಮುಚ್ಚುವ, ರಸ್ತೆಗೆ ಹೊಸದಾಗಿ ಡಾಂಬರು ಹಾಕುವ ಕೆಲಸ ಭರದಿಂದೇನೊ ಸಾಗಿದೆ. ರಸ್ತೆ ಬದಿಯ ಫುಟ್ ಪಾತ್ ಮೇಲಿನ ತ್ಯಾಜ್ಯ ಸಾಮೂಹಿಕ ಸ್ವಚ್ಛತೆಯಡಿ ಶುಚಿಗೊಳಿಸಲಾಗುತ್ತಿದೆ. ಆದರೆ ಬಂಡವಾಳ ಹೂಡಿಕೆದಾರ ಸಮಾವೇಶ ಮುಗಿಯುವ ತನಕ ನಿರ್ವಹಣೆಯಾಗಿ ಆನಂತರ ಇವುಗಳ ಪರಿಸ್ಥಿತಿ ಏನಾಗುವುದೋ ಎಂದು ನಾಗರೀಕರು ಮಾತನಾಡುತ್ತಿದ್ದಾರೆ.

WhatsApp Join our WhatsApp Channel
Previous Post

ಪಿ. ರಾಮಯ್ಯ ಪರಿಶುದ್ಧ ಪತ್ರಕರ್ತ
ಸಿಎಂ ಬಸವರಾಜ ಬೊಮ್ಮಾಯಿ ಗುಣಗಾನ

Next Post

MSIL | ಎಂಎಸ್ ಐಎಲ್ ನಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ

Next Post

MSIL | ಎಂಎಸ್ ಐಎಲ್ ನಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ

ರಾಜ್ಯದಲ್ಲಿ ಯಶಸ್ವಿಯಾಗಿ ನಡೆದ "ಕೋಟಿ ಕಂಠ" ಗಾಯನ ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group