Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSRTC Employees Accident Insurance | ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಕರ್ತವ್ಯದಲ್ಲಿರಲಿ – ಇಲ್ಲದಿರಲಿ 1 ಕೋಟಿ ರೂ. ಅಪಘಾತ ವಿಮೆ ಜಾರಿ..!!: 35 ಸಾವಿರ ಸಿಬ್ಬಂದಿಗೆ ಅನುಕೂಲ

ಕೆಎಸ್ ಆರ್ ಟಿಸಿ ಈಗಾಗಲೇ ಎಸ್ ಬಿಐ ಜೊತೆ ಪ್ರತಿ ನೌಕರನಿಗೆ 50 ಲಕ್ಷ ರೂ. ಅಪಘಾತ ವಿಮೆ ಒದಗಿಸಿದೆ | ಅದರ ಜೊತೆಗೆ ಸೋಮವಾರ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಸಹಯೋಗದಲ್ಲಿ 50 ಲಕ್ಷ ರೂ. ಅಪಘಾತ ವಿಮೆ ನೀಡಲು ಒಡಂಬಡಿಕೆ | ಒಟ್ಟಾರೆ ಪ್ರತಿ ಸಿಬ್ಬಂದಿಗೆ 1 ಕೋಟಿ ರೂ. ವೈಯುಕ್ತಿಕ ಅಪಘಾತ ವಿಮೆ ಸೌಲಭ್ಯ

by Bengaluru Wire Desk
November 14, 2022
in News Wire
Reading Time: 1 min read
0
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.14 www.bengaluruwire.com :  ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ (KSRTC) ತನ್ನ ಸಿಬ್ಬಂದಿಗಳಿಗೆ ಒಟ್ಟು  1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಿ ಕಾರ್ಮಿಕರ ಹಿತ ಕಾಪಾಡುವ ತನ್ನ ಜವಾಬ್ದಾರಿಯಲ್ಲಿ ಮಂಚೂಣಿಗೆ ಹಾದಿಯಲ್ಲಿ ನಿಂತಂತಾಗಿದೆ.

ಕೆಎಸ್ ಆರ್ ಟಿಸಿ ಈಗಾಗಲೇ 50 ಲಕ್ಷ  ರೂ. ಅಪಘಾತ ವಿಮೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ರವರಿಂದ ನಿಗಮದ ಕಾರ್ಮಿಕರಿಗೆ ವ್ಯವಸ್ಥೆ ಮಾಡಿತ್ತು. ಆದರೆ ಸೋಮವಾರ (ನ.14) ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ರವರ ಜೊತೆಗೆ ನಿಗಮದ ಪ್ರತಿ ಕಾರ್ಮಿಕರಿಗೂ 50 ಲಕ್ಷ ರೂ. ಅಪಘಾತ ವಿಮೆ ಸೌಲಭ್ಯ ಕಲ್ಪಿಸಲು ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ ಸಾರಿಗೆ ನಿಗಮವು ತನ್ನ ಪ್ರತಿಯೊಬ್ಬ ಸಾರಿಗೆ ನೌಕರನಿಗೆ ಒಟ್ಟು 1 ಕೋಟಿ ರೂ. ವೈಯುಕ್ತಿಕ ಅಪಘಾತ ವಿಮೆ ಲಭ್ಯವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇದರಿಂದ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವ 35,500 ಸಿಬ್ಬಂದಿಗೆ ಅನುಕೂಲವಾಗಲಿದೆ.

ನಿಗಮದ ಸಿಬ್ಬಂದಿಗಳು ಕರ್ತವ್ಯದ ಮೇಲೆ ಇದ್ದಾಗ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗ ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ 50 ಲಕ್ಷ ರೂ.ಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಈ ಹಿಂದೆ ಜಾರಿಗೆ ತಂದಿತ್ತು. ಇದರ ಮುಂದುವರಿದ ಭಾಗವಾಗಿ, ಇಂದು ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ರವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ವಿಮಾ ಯೋಜನೆಗೆ ಸಿಬ್ಬಂದಿಗಳು ಪ್ರತಿ ತಿಂಗಳು ರೂ.62.50 + ಜಿ.ಎಸ್.ಟಿ  ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.

ಈ ಸಂದರ್ಭದಲ್ಲಿ, ಮಾತನಾಡಿದ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ ನವರು ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ  ಜಾರಿಗೊಳಿಸುತ್ತಿರುವ ಅತ್ಯುತ್ತಮವಾದ ಯೋಜನೆಯಾಗಿದ್ದು, ಕೆಲದಲ್ಲಿರಲಿ ಅಥವಾ ಕರ್ತವ್ಯದಲ್ಲಿಲ್ಲದಿದ್ದರೂ ಅಪಘಾತ ವಿಮಾ ಯೋಜನೆಯ ಸೌಲಭ್ಯವಿರುವುದು ಸಿಬ್ಬಂದಿಗೆ ಮತ್ತಷ್ಟು ಅನುಕೂಲವಾಗಲಿದೆಯೆಂದು ಸಂತಸ ವ್ಯಕ್ತಪಡಿಸಿದರು.

ಅಧ್ಯಕ್ಷರು ಈ ಯೋಜನೆಗೆ ತುಂಬು ಹೃದಯದ ಸಹಕಾರ ನೀಡಿದ ಜಂಟಿ‌ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಮುಖಂಡರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು  ಹಾಗೂ  ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯ ಸಹಯೋಗವನ್ನು ಶ್ಲಾಘಿಸಿದರು.

ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕರು ಹಾಗೂ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಪ್ರಧಾನ ವ್ಯವಸ್ಥಾಪಕರಾದ ಒಡಂಬಡಿಕೆಗೆ ಅಂಗ್ರೂಪ್ ಸೋನಂ ಸಹಿ ಹಾಕಿದರು.

 ಕೆಲಸದಲ್ಲಿ ಇರಲಿ ಅಥವಾ  ಇಲ್ಲದಿರಲಿ ವೈಯಕ್ತಿಕ ವಿಮೆ ಲಭ್ಯ :

ಈ ಯೋಜನೆಯಲ್ಲಿ ಸಿಬ್ಬಂದಿಗಳು ಪ್ರತಿ ತಿಂಗಳು 62.50 ರೂ.+ ಜಿ ಎಸ್ ಟಿ ಸೇರಿ ಪ್ರೀಮಿಯಂ (ವಾರ್ಷಿಕ ರೂ.750+ ಜಿ.ಎಸ್.ಟಿ ಸೇರಿದಂತೆ ಒಟ್ಟು ರೂ.885/-)  ಪಾವತಿಸಬೇಕಾಗುತ್ತದೆ. ಈ ವೈಯಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 1 ಕೋಟಿ ರೂ. ಪರಿಹಾರದ ಹಣ ಕೂಡಲೇ ದೊರೆಯಲಿದೆ. ಅಪಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗ ವೈಕಲ್ಯಕ್ಕೆ ತುತ್ತಾದಲ್ಲಿ 50 ಲಕ್ಷ ರೂ.ಗಳವರೆಗೂ ವಿಮಾ ಪರಿಹಾರ ದೊರೆಯಲಿದೆ. ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ  ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

ತಾತ್ಕಾಲಿಕ ಅಂಗವೈಕಲ್ಯವಾದರೆ ಚೇತರಿಕೆ ತನಕ ಪ್ರತಿ ವಾರ 5 ಸಾವಿರ ರೂ. :

 ಒಂದು ವೇಳೆ ಸಿಬ್ಬಂದಿಯು ಅಪಘಾತಕ್ಕೆ ಒಳಗಾಗಿ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ  ನಿರ್ವಹಿಸಲು ಅಸಮರ್ಥನಾದ  ಪಕ್ಷದಲ್ಲಿ, ಆತನು ಚೇತರಿಸಿಕೊಳ್ಳುವವರೆಗೆ, ಅವನಿಗೆ ವಿಮಾ ಮಾಡಲಾದ 50 ಲಕ್ಷ ರೂ. ಮೊತ್ತದ ಶೇಕಡಾ ಒಂದರಷ್ಟು ಮೊತ್ತವನ್ನು ಪ್ರತಿವಾರ 5,000 ರೂ. ಗಳಿಗೆ ಹೆಚ್ಚದಂತೆ ಅಥವಾ ಅವರ ಮಾಸಿಕ ಸಂಬಳದ  ಶೇಕಡಾ 25ರಷ್ಟನ್ನು,ಯಾವುದು ಕಡಿಮೆಯೋ ಅದನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡುವುದು. ಈ ಎರಡು ವಿಮಾ ಯೋಜನೆಗಳಿಂದ ನಿಗಮವು ತನ್ನ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಂತಾಗಿದೆ. ಇಲ್ಲಿಯವರೆಗೂ ನಿಗಮದ ಸಿಬ್ಬಂದಿಗಳಿಗೆ ಯಾವುದೇ ಅಪಘಾತ  ವಿಮಾ ಯೋಜನೆಯ ಸೌಲಭ್ಯವಿರಲಿಲ್ಲ.

ಸಿಬ್ಬಂದಿಗಳು ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ  ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಸೋಮವಾರ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ರವರೊಂದಿಗೆ ಮಾಡಿಕೊಂಡಿರುವುದು ಹಾಗೂ ಕೆಲ ದಿನಗಳ ಹಿಂದೆಯಷ್ಟೇ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾರವರೊಡನೆ ಸಹಿ ಹಾಕಿರುವ ಒಡಂಬಂಡಿಕೆಯು ಕಾರ್ಮಿಕರ ಹಿತ ಕಾಪಾಡುವಲ್ಲಿ ಪ್ರಮುಖ ಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಕೆಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ  ನಿಗಮದ ಸಿಬ್ಬಂದಿ & ಜಾಗೃತ ವಿಭಾಗದ ನಿರ್ದೇಶಕರಾದ ಡಾ.ನವೀನ್ ಭಟ್.ವೈ, ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರುಗಳಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಸಂಘಗಳ ಮುಖಂಡರುಗಳು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಪ್ರಾದೇಶಿಕ ವ್ಯವಸ್ಥಾಪಕರಾದ ಉಷಾ ಚಂದ್ರಮೌಳಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW Special | #NagaraholeTigerReserve | ನಾಗರಹೊಳೆ ಅರಣ್ಯದಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು : ತಾಯಿಯಿಂದ ಬೇರ್ಪಟ್ಟ 3 ಹುಲಿಮರಿಗಳು – ಹುಲಿ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯನಾ ?

Next Post

ಮುಖ್ಯ ಪೇದೆಯೊಬ್ಬರ ಪುಟ್ಟ ಬಾಲಕಿಯ ಈ ಕೆಲಸ ಎಲ್ಲರಿಗೂ ಮಾದರಿ….!

Next Post
ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆಯ ಮುಖ್ಯಪೇದೆ ನಾಗರಾಜಪ್ಪ ಹಾಗೂ ಆತನ ಪುತ್ರಿ ನಾಗಲಕ್ಷ್ಮಿ ಚಿತ್ರ

ಮುಖ್ಯ ಪೇದೆಯೊಬ್ಬರ ಪುಟ್ಟ ಬಾಲಕಿಯ ಈ ಕೆಲಸ ಎಲ್ಲರಿಗೂ ಮಾದರಿ....!

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

Lokayukta Trap | ಖಾತೆ ಹೆಸರು ಬದಲಾವಣೆಗೆ ಲಂಚ : ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮಹಿಳಾ ಕೆಎಎಸ್ ಅಧಿಕಾರಿ ವರ್ಷಾ ಒಡೆಯರ್

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group