Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

SSC EXAMS 2023 | ಕನ್ನಡದಲ್ಲೂ ಎಸ್ ಎಸ್ ಸಿ ಪರೀಕ್ಷೆ ಬರೆಯಲು ಅವಕಾಶ : 11409 ಹುದ್ದೆಗಳಿಗೆ ಅಧಿಸೂಚನೆ ; ಹೇಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ

ಹುದ್ದೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಫೆ.17 ಕೊನೆಯ ದಿನ | ಏಪ್ರಿಲ್‌ನಲ್ಲಿ ಪರೀಕ್ಷೆ |ಎಸ್ ಎಸ್ ಸಿ ಕ್ರಮವನ್ನು ಸ್ವಾಗತಿಸಿ ಕನ್ನಡ ಸಾಹಿತ್ಯ ಪರಿಷತ್ತು

by Bengaluru Wire Desk
January 21, 2023
in News Wire, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.21 www.bengaluruwire.com : ಕೇಂದ್ರ ಸರ್ಕಾರದ ಹುದ್ದೆಯ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಿಹಿ ಸುದ್ದಿ. ಸಿಬ್ಬಂದಿ ನೇಮಕಾತಿ ಅಯೋಗ (ಎಸ್‌ಎಸ್‌ಸಿ- SSC) ಇದೇ ಪ್ರಥಮ ಬಾರಿಗೆ ಕನ್ನಡ, ಕೊಂಕಣಿ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಎಸ್ಎಸ್ ಸಿಯು ಒಟ್ಟು 11,409 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಎಸ್‌ಎಸ್‌ಸಿ ಪರೀಕ್ಷೆಗಳನ್ನು ಇಲ್ಲಿಯವರೆಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅವಕಾಶವಿತ್ತು. ಇದರಿಂದ ಹಿಂದಿ ಭಾಷಿಗರೇ ಹೆಚ್ಚಿನ ಸಂಖ್ಯೆ ಯಲ್ಲಿ ಕೇಂದ್ರ ಸರ್ಕಾರದ ಸೇವೆಗೆ ಆಯ್ಕೆಯಾಗುತ್ತಿದ್ದರು. ಹಾಗಾಗಿ, ಇದುವರೆಗೂ ಕೇಂದ್ರ ಸರ್ಕಾರದ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹಿಂದಿ ಭಾಷಿಕರ ಪ್ರಾಬಲ್ಯವಿತ್ತು. ಕನ್ನಡಿಗರ ಧ್ವನಿ ಕ್ಷೀಣಿಸಿತ್ತು. ಆದರೀಗ ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದು ಹುದ್ದೆಯ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಎಸ್‌.ಎಸ್‌ಸಿ 10,880 ಮಲ್ಟಿ ಟಾಸ್ಕಿಂಗ್‌ ಸ್ಟಾಫ್ (ಎಂಟಿಎಸ್- Multi Tasking Staff) ಹಾಗೂ ಸುಂಕ ಮತ್ತು ಪರೋಕ್ಷ ತೆರಿಗೆಯ ಕೇಂದ್ರೀಯ ಮಂಡಳಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊದಲ್ಲಿ ಖಾಲಿ ಇರುವ 529 ಹವಾಲ್ದಾರ್ (Hawaldar) ಸೇರಿ 11,409 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಪರೀಕ್ಷೆ ತೆಗೆದುಕೊಳ್ಳುವ ರಾಜ್ಯದ ಅಭ್ಯರ್ಥಿಗಳು ಕನ್ನಡವನ್ನು ಆಯ್ಕೆ ಮಾಡಿಕೊಳ್ಳಲು 08 ಕೋಡ್ ಬಳಸಬಹುದು. ಕಂಪ್ಯೂಟರ್ ಆಧಾರಿತ ಪರೀಕ್ಷೆಯು (ಪತ್ರಿಕೆ ಒಂದು) ವಸ್ತುನಿಷ್ಠ ಮಾದರಿಯ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪತ್ರಿಕೆಯನ್ನು ಅಭ್ಯರ್ಥಿಗಳು ತಮಗೆ ಅನುಕೂಲವಾಗುವ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಆದರೆ ಎರಡನೇ ಪತ್ರಿಕೆಯನ್ನು ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ಅಲ್ಲದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಯಾವುದಾದರೂ ಒಂದು ಭಾಷೆಯಲ್ಲಿ ಬರೆಯಬಹುದು. 50 ಅಂಕಗಳಿಗೆ ವಿವರಣಾತ್ಮಕ ಅಥವಾ ಪ್ರಬಂಧ ಮಾದರಿಯಲ್ಲಿ ಉತ್ತರಿಸಬೇಕಾಗುತ್ತದೆ. ಇದಕ್ಕೆ 45 ನಿಮಿಷಗಳ ಅವಕಾಶವಿರುತ್ತದೆ ಎಂದು ಎಸ್ ಎಸ್ ಸಿ ತಿಳಿಸಿದೆ.

ರಾಜ್ಯದ ಎಲ್ಲೆಲ್ಲಿವೆ ಪರೀಕ್ಷಾ ಕೇಂದ್ರಗಳು? : ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಎಸ್ ಎಸ್ ಸಿಯ ಪರೀಕ್ಷಾ ಕೇಂದ್ರಗಳಿವೆ. ಹುದ್ದೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಫೆ.17 ಕೊನೆಯ ದಿನವಾಗಿದೆ. ಏಪ್ರಿಲ್‌ನಲ್ಲಿ ಪರೀಕ್ಷೆ ನಡೆಯಲಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ 9483862020, ವೆಬ್ ಸೈಟ್ : https://ssc.nic.in  ಸಂಪರ್ಕಿಸಬಹುದು.

ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದಕ್ಕೆ ರಾಜ್ಯದ ಅಭ್ಯರ್ಥಿಗಳು ಸ್ವಾಗತಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕನ್ನಡಿಗರನ್ನೇ ಆಯ್ಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಪ್ರಾದೇಶಿಕ ಮೀಸಲಾತಿ ಕಲ್ಪಿಸಬೇಕು. ಆಗ ಇಲ್ಲಿಯ ಕನ್ನಡಿಗರಿಗೆ ರಾಜ್ಯದಲ್ಲಿಯೇ ಕೆಲಸ ನಿರ್ವಹಿಸಲು ಅನುಕೂಲವಾಗುತ್ತದೆ ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಎಸ್ ಎಸ್ ಸಿ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ :

‘ಎಸ್ಎಸ್ ಸಿ ಆಯೋಗ ಮುಂದಿನ ಏಪ್ರಿಲ್ ತಿಂಗಳಿನಲ್ಲಿ 11,409 ಹುದ್ದೆಗಳಿಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಗೌರವದಿಂದ ಸ್ವಾಗತಿಸುತ್ತದೆ. ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾನೂನು ಕ್ರಮ ಸೇರಿದಂತೆ ನಿರಂತರ ಹೋರಾಟ ನಡಸುತ್ತಾ ಬಂದಿದ್ದು ಪರಿಷತ್ತಿನ ಕಾನೂನು ಹೋರಾಟಕ್ಕೆ ಸಂದ ಜಯವಾಗಿದೆ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಪಡೆಯಲು ಬಯಸುವ ಕನ್ನಡಿಗರಿಗೆ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆಯುವುದು ಕಷ್ಟವಾಗುತ್ತಿತ್ತು. ಈ ಸಮಸ್ಯೆ ಈಗ ನಿವಾರಣೆಯಾಗಿದೆ.’

– ನಾಡೋಜ ಡಾ.ಮಹೇಶ್ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು

WhatsApp Join our WhatsApp Channel
Previous Post

#MilletTradeFair2023 | ಮೈದಾ ಪಿಜ್ಜಾ ಬಿಟ್ಟಾಕಿ : ಇಲ್ಲಿದೆ ಶಕ್ತಿ ಹೆಚ್ಚಿಸುವ ನವಣೆ ಪಿಜ್ಜಾ, ಸಿರಿಧಾನ್ಯ ಪಾಸ್ತಾ…!

Next Post

BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಕಟ್ಟಡ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಜ.25ರ ಗಡುವು

Next Post
ಬಿಡಿಎ ಕೇಂದ್ರ ಕಚೇರಿ ಚಿತ್ರ

BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಕಟ್ಟಡ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಜ.25ರ ಗಡುವು

ನಗರದಲ್ಲಿ ಸಸಿ ನೆಡಲು ಪಾಲ್ಗೊಂಡಿರುವ ತಂಡಗಳಿಗೆ ವಿಧಾನಸಭಾ ಕ್ಷೇತ್ರವಾರು ಪ್ರಶಂಸನಾ ಪ್ರಮಾಣ ಪತ್ರ ವಿತರಿಸಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

BBMP News | ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಚಾಲನೆ : ನಗರದಲ್ಲಿ ಈ ವರ್ಷ 2 ಲಕ್ಷ ಸಸಿ ನೆಡಲು ತೀರ್ಮಾನ!!

Please login to join discussion

Like Us on Facebook

Follow Us on Twitter

Recent News

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group