Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Vishnuvardhan Smaraka | ಮೈಸೂರು : ಸಾಹಸ ಸಿಂಹನ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ‘ದಾದ’ ಇಲ್ಲಿ ಸದಾ ಜೀವಂತ..!

ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ಐದು ಎಕರೆ ಜಾಗದಲ್ಲಿ ತಲೆ ಎತ್ತಿದೆ ವಿಶಾಲ ಸ್ಮಾರಕ |ಆರ್ಟ್ ಗ್ಯಾಲರಿ, ಸುಸಜ್ಜಿತ ಸಭಾಂಗಣ, ಲ್ಯಾಂಡ್ ಸ್ಕೇಪ್, ಕಾರಂಜಿ, 6.5 ಅಡಿ ಎತ್ತರದ ವಿಷ್ಣು ಪ್ರತಿಮೆ ಇನ್ನು ಹಲವು ವಿಶೇಷತೆಗಳಿವೆ.

by Bengaluru Wire Desk
January 29, 2023
in News Wire, Public interest
Reading Time: 2 mins read
0
ಜ.29ರಂದು ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿನ ಹಾಲಾಳು ಗ್ರಾಮದಲ್ಲಿ ಉದ್ಘಾಟನೆಗೊಂಡ ಡಾ.ವಿಷ್ಣುವರ್ಧನ್ ಪುತ್ಥಳಿ ಮತ್ತು ಸ್ಮಾರಕದ ಚಿತ್ರ

ಜ.29ರಂದು ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿನ ಹಾಲಾಳು ಗ್ರಾಮದಲ್ಲಿ ಉದ್ಘಾಟನೆಗೊಂಡ ಡಾ.ವಿಷ್ಣುವರ್ಧನ್ ಪುತ್ಥಳಿ ಮತ್ತು ಸ್ಮಾರಕದ ಚಿತ್ರ

ಮೈಸೂರು, ಜ.29 www.bengaluruwire.com : ಸಾಹಸಸಿಂಹ, ಅಭಿಮಾನಿಗಳ ಪಾಲಿನ ದಾದಾ ಡಾ.ವಿಷ್ಣುವರ್ಧನ್ ಸ್ಮಾರಕ ಅಂತೂ 13 ವರ್ಷಗಳ ಹೋರಾಟದ ಬಳಿಕ ಕೊನೆಗೂ ಅವರ ಕುಟುಂಬದವರ ಆಶಯದಂತೆ ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ ಲೋಕಾರ್ಪಣೆಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತೀ ವಿಷ್ಣುವರ್ಧನ್ ಸಮ್ಮುಖದಲ್ಲಿ ನೂತನ ಸ್ಮಾರವನ್ನು ಉದ್ಘಾಟನೆ ಮಾಡಿದರು.

ರಾಜಕಳೆಯನ್ನು ಹೊಂದಿದ ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಪುತ್ಥಳಿ

2009ರಲ್ಲಿ ಡಾ.ವಿಷ್ಣುವರ್ಧನ್ ಅಗಲಿಕೆಯ ಬಳಿಕ ಅವರ ಸ್ಮಾರಕವನ್ನು ಬೆಂಗಳೂರಿನಲ್ಲೇ ಅವರನ್ನು ಅಂತ್ಯಸಂಸ್ಕಾರ ಮಾಡಿದ ಸ್ಥಳದಲ್ಲೇ ನಿರ್ಮಿಸಬೇಕೆಂದು ಅಭಿಮಾನಿಗಳು ಸರ್ಕಾರದ ಮೇಲೆ ಸಾಕಷ್ಟು ಒತ್ತಾಯ, ಆಗ್ರಹ ತಂದಿದ್ದರು. ಆ ಬಳಿಕ ಕಳೆದ ಕೆಲ ವರ್ಷಗಳಿಂದ ಒಂದಲ್ಲ ಒಂದು ವಿಚಾರಕ್ಕೆ ವಿಷ್ಣುವರ್ಧನ್ ಸ್ಮಾರಕ ವಿಷಯ ಪ್ರಮುಖವಾಗಿ ಸುದ್ದಿಯಲ್ಲಿತ್ತು. ಇದೀಗ ಕೊನೆಗೂ ಅದು ಕುಟುಂಬಸ್ಥರ ಆಸೆಯಂತೆ ಮೈಸೂರಿನಲ್ಲಿಯೇ ನಿರ್ಮಾಣವಾಗಿ ಉದ್ಘಾಟನೆಯಾಗಿದೆ.

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೂ ಮುನ್ನ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ವಿಷ್ಣುವರ್ಧನ್ ಒಬ್ಬ ಮೇರು ನಟ. ಬಹುಭಾಷಾ ನಟ. 200ಕ್ಕೂ ಹೆಚ್ಚು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸಾಹಸಿಂಹ ನಿಧನದ ನಂತರ ಸ್ಮಾರಕ ನಿರ್ಮಾಣ ಹಾಗೂ ಜಾಗದ ವಿಚಾರದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿತ್ತು. ಕೊನೆಗೂ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿ 11 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣವಾಗಿದೆ. ಇದೊಂದು ಉತ್ತಮ ಸ್ಮಾರಕ, ಕಲೆ, ಸಂಸ್ಕೃತಿ ಹಾಗೂ ಪ್ರವಾಸ ತಾಣವಾಗಬೇಕು ಎಂಬುದು ನಮ್ಮ ಆಶಯವಾಗಿದೆ” ಎಂದು ಅವರು ಹೇಳಿದರು.

ವಿಷ್ಣುವರ್ಧನ್ ಪುತ್ಥಳಿ ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಹಿರಿಯ ನಟಿ ಡಾ.ಭಾರತಿ ವಿಷ್ಣುವರ್ಧನ್ ಚಿತ್ರದಲ್ಲಿದ್ದಾರೆ.

70ರ ದಶಕದಲ್ಲಿ ನಾಗರಹಾವು ಚಿತ್ರದ ಅದ್ಭುತ ಯಶಸ್ಸಿನ ಮೂಲಕ ರಾಷ್ಟ್ರಮಟ್ಟದಲ್ಲಿ ಬಹು ದೊಡ್ಡ ಕ್ರಾಂತಿ ಹಾಗೂ ಸಂಚಲನವನ್ನು ಸೃಷ್ಟಿ ಮಾಡಿದಂತಹ ಹೆಗ್ಗಳಿಕೆಗೆ ಪಾತ್ರವಾದವರು ಡಾ.ವಿಷ್ಣುವರ್ಧನ್. ಸುಮಾರು ನಾಲ್ಕು ದಶಕಗಳ ಕಾಲ, ನಿರಂತರವಾಗಿ 200ಕ್ಕೂ ಹೆಚ್ಚು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸುವ ಮೂಲಕ, ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಪ್ರಸಿದ್ದಿಯನ್ನು ಪಡೆದುಕೊಂಡಿದ್ದಾರೆ.

 ಡಾ.ವಿಷ್ಣುವರ್ಧನ ಪ್ರತಿಷ್ಠಾನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಾ.ವಿಷ್ಣುವರ್ಧನ್ ಸ್ಮಾರಕ ರಾಜ್ಯ ಸರ್ಕಾರವು, ಮೈಸೂರು ಜಿಲ್ಲೆಯಲ್ಲಿ 5 ಎಕರೆ ಜಾಗವನ್ನು ನಿಗದಿಪಡಿಸಿತ್ತು. ಸ್ಮಾರಕ ನಿರ್ಮಾಣಕ್ಕಾಗಿ ಒಟ್ಟು 11 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೋಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದವರ ಮೂಲಕ ಸ್ಮಾರಕ ನಿರ್ಮಾಣದ ಕಾಮಗಾರಿ ನಡೆಸಿದ್ದಾರೆ.

ವಿಷ್ಣುದಾದನ ಹೆಸರಿನ ಸ್ಮಾರಕ ಉದ್ಘಾಟನೆ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ರಕ್ತದಾನ ಶಿಬಿರ, ಬೈಕ್ ರ್ಯಾಲಿ, ಅನ್ನದಾನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳು ವೇದಿಕೆಯಲ್ಲಿ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಆರಂಭಿಸುವಾಗ ವಿಷ್ಣು ಅವರ ಅಭಿಮಾನಿಗಳು ಡಾ.ವಿಷ್ಣುವರ್ಧನ್ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಭಿತ್ತಿಪತ್ರಗಳನ್ನು ಹಿಡಿದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ, ನೀವು ಪ್ಲೇಕಾರ್ಡ್ ಹಿಡಿದು ಕೇಳಿರುವ ಬೇಡಿಕೆಯಂತೆ, ನಿಮ್ಮ ಭಾವನೆಗಳಿಗೆ ಸ್ಪಂದಿಸಲಿದೆ ಎಂದಷ್ಟೆ ಹೇಳಿದರು.

ಸಾಹಸ ಸಿಂಹನ ಸ್ಮಾರಕದಲ್ಲಿನ ವಿಶೇಷಗಳೇನು?:

ಡಾ.ವಿಷ್ಣುವರ್ಧನ್ ಸ್ಮಾರಕ ಭವನವು ಅವರು ನಟಿಸಿರುವ ಚಲನಚಿತ್ರ ಹಾಗೂ ಅವರ ಜೀವನ ಚರಿತ್ರೆಯ ಸುಮರು 728 ಛಾಯಾಚಿತ್ರಗಳನ್ನು ಒಳಗೊಂಡ ಒಂದು ಬೃಹತ್ ಫೊಟೋ ಗ್ಯಾಲರಿ (ಚಿತ್ರವೇದಿಕೆ),  6.5 ಅಡಿ ಎತ್ತರದ ವಿಷ್ಣುವರ್ಧನ್ ಅವರು ರಾಜರ ಧಿರಿಸಿನಲ್ಲಿರುವ ಆಳೆತ್ತದ ಸುಂದರ ಪ್ರತಿಮೆ, ನೀರಿನ ಕಾರಂಜಿ, 250 ಆಸನಗಳುಳ್ಳ ಥಿಯೇಟರ್‌, ವಿಶಾಲವಾದ ಉದ್ಯಾನವನ, ಕಲಿಕಾ ಕೇಂದ್ರ, ಭೂದೃಶ್ಯ, ತರಬೇತಿ ಕೊಠಡಿ, ನಾಟಕಗಳಿಗಾಗಿ ಮೇಕಪ್ ಕೊಠಡಿ, ಕಚೇರಿ, ಪಾಕಶಾಲೆ, ಉಪಹಾರ ಕೇಂದ್ರ, ಅತಿಥಿಗಳು ಉಳಿಯಲು ವಸತಿ ವ್ಯವಸ್ಥೆ, ಶೌಚಾಲಯಗಳನ್ನೊಳಗೊಂಡ ಹೊರಾಂಗಣ ಉದ್ಯಾನವನ ಗಳನ್ನು ಒಳಗೊಂಡಿದೆ.

ಡಾ.ವಿಷ್ಣುವರ್ಧನ್ ಸ್ಮಾರಕವನ್ನು ಪ್ರತಿದಿನವೂ ಅಭಿಮಾನಿಗಳೂ ಒಳಗೊಂಡಂತೆ ಎಲ್ಲರಿಗೂ ಸಾರ್ವಜನಿಕ ವೀಕ್ಷಣೆಗೆ ಅನುವು ಮಾಡಿಕೊಡಲು ರೂಪು ರೇಷೆಗಳು ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಡಾ.ವಿಷ್ಣುವರ್ಧನ್ ಅಭಿನಯಿಸಿದ ಚಿತ್ರಗಳ ಆಯ್ದ ಹಾಡು ಮತ್ತು ಸಂಭಾಷಣೆಗಳನ್ನು ಧ್ವನಿ ಮತ್ತು ದೃಶ್ಯ ರೂಪದಲ್ಲಿ ಕೇಳಿಸುವ ಹಾಗೂ ತೋರಿಸುವ ಪ್ರಯತ್ನ ನಡೆದಿದೆ. ಸ್ಮಾರಕ ಕಟ್ಟಡವು ತಳ ಮಹಡಿ ಹಾಗೂ ನೆಲಮಹಡಿಯನ್ನು ಹೊಂದಿದೆ. ಪ್ರವೇಶ ದ್ವಾರಕ್ಕೆ ಡಾ.ವಿಷ್ಣುವರ್ಧನ್ ಪ್ರತಿಮೆ ಕಾಣುತ್ತದೆ. ಆದರೆ, ಪ್ರವೇಶ ದ್ವಾರ ಹಾಗೂ ಪ್ರತಿಮೆಯ ನಡುವೆ ಸುಂದರ ಕಾರಂಜಿಯನ್ನು ಸ್ಥಾಪಿಸಲಾಗಿದೆ. ಕಾರಂಜಿ ಇರುವ ಆವರಣದಲ್ಲಿ ಡಾ.ವಿಷ್ಣುವರ್ಧನ್ ಅವರ ಆಯ್ದ ಸಂಭಾಷಣೆಗಳನ್ನು ಉಕ್ಕಿನ ಅಕ್ಷರಗಳಲ್ಲಿನ ಕೆತ್ತನೆಯಲ್ಲಿ ಅಳವಡಿಸಲಾಗಿದೆ.

ವಿಷ್ಣುವರ್ಧನ್ ಅಭಿನಯಿಸಿದ ಚಿತ್ರಗಳ ದೊಡ್ಡ ದೊಡ್ಡ ಕಟೌಟ್ ಹಾಕಿದ ಅಭಿಮಾನಿಗಳು

ಸಾಂಸ್ಕೃತಿಕ ನಗರಿ ವಿಷ್ಣು ಅಚ್ಚುಮೆಚ್ಚಿನ ಊರು :

ಮೈಸೂರು ನಗರದ ಬಗ್ಗೆ ವಿಷ್ಣುವರ್ಧನ್‌ ಅವರು ಮೊದಲಿನಿಂದಲೂ ಇಷ್ಟವಾದ ಊರು. ಸಾಂಸ್ಕೃತಿಕ ನಗರಿಯನ್ನು ಅವರು ಸಾಕಷ್ಟು ಮೆಚ್ಚಿಕೊಂಡಿದ್ದರು. ಇವರ ತಮ್ಮ ಬಾಲ್ಯವನ್ನು ಇದೇ ಊರಿನಲ್ಲಿ ಕಳೆದು, ಹೈಸ್ಕೂಲ್ ಅನ್ನು ಇಲ್ಲಿಯೇ ಓದಿ ಮುಘಿಸಿದ್ದರು. ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಮೈಸೂರಿಗೆ ಬಂದಾಗಲೆಲ್ಲಾ ಇಲ್ಲಿ ಸಮಯ ಕಳೆಯುತ್ತಿದ್ದರು. ಇದೀಗ ಅದೇ ಊರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗಿರುವುದು ಅವರ ಪತ್ನಿ ಹಾಗೂ ನಟಿ ಡಾ.ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಸೇರಿದಂತೆ ಅವರ ಕುಟುಂಬದವರಿಗೆ ಖುಷಿ ಕೊಟ್ಟಿದೆ. ಅಲ್ಲದೆ ತಮ್ಮ ಕಡೆಯ ದಿನಗಳನ್ನ ಮೈಸೂರಲ್ಲಿ ಕಳೆಯಲು ವಿಷ್ಣವರ್ಧನ್ ಆಸೆಪಟ್ಟಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬೇಕಾಗಿದೆ.

ಕನ್ನಡ ಚಿತ್ರರಂಗದ ಪ್ರಜ್ವಲಿಸುವ ತಾರೆಗೆ ಸಂದ ಗೌರವಗಳು ಹಲವು :

ಕನ್ನಡ ಚಿತ್ರರಂಗದಲ್ಲಿ ಸುಮಾರು 37 ವರ್ಷಗಳ ಕಾಲ ಪ್ರಜ್ವಲಿಸಿದ್ದ ಹಾಗೂ ಸಿನಿಮಾ ಆಗಸದಲ್ಲಿ ಮಿಂಚಿದ ಪ್ರತಿಭಾನ್ವಿತ ತಾರೆ ವಿಷ್ಣು ಅವರು ನಾಗರಹಾವು, ಹೊಂಬಿಸಿಲು, ಬಂಧನ, ಲಯನ್ ಜಗಪತಿ ರಾವ್, ಲಾಲಿ, ವೀರಪ್ಪ ನಾಯಕ ಮತ್ತು ಆಪ್ತ ರಕ್ಷಕ  ಚಿತ್ರಗಳಲ್ಲಿನ ತಮ್ಮ ಅಭಿಯನಕ್ಕಾಗಿ ರಾಜ್ಯ ಸರ್ಕಾರದಿಂದ ಒಟ್ಟು ಏಳು ಬಾರಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾಲ್ಕು ಬಾರಿ ಫಿಲಂ ಫೇರ್ ಪ್ರಶಸ್ತಿ, ಎರಡು ಬಾರಿ ಸಿನಿಮಾ ಎಕ್ಸ್ ಪ್ರೆಸ್ ಪ್ರಶಸ್ತಿ, 1990ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2005ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. 2007ರಲ್ಲಿ ಇವರ ನಟನಾ ಕಲೆಗೆ ಡಾ.ರಾಜ್ ಕುಮಾರ್ ಪ್ರಶಸ್ತಿಯೂ ಸಂದಿದೆ. 2009ರಲ್ಲಿ ಡಾ.ವಿಷ್ಣುವರ್ಧನ್ ನಿಧನದ ನಂತರ ಅವರ ಹೆಸರಿನಲ್ಲಿಯೇ ಕನ್ನಡ ಚಿತ್ರರಂಗದಲ್ಲಿ ಸುಧೀರ್ಘ ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡವರಿಗೆ ರಾಜ್ಯ ಸರ್ಕಾರ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿನ ನೀರಿನ ಕಾರಂಜಿಯು ಸಂಜೆಯ ಬೆಳಕಿನಲ್ಲಿ ಕಂಡಿದ್ದು ಹೀಗೆ

ಕಲಾವಿದನಿಗೆ ಸಂದಗೌರವ :

ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಗೌರವಾರ್ಥ ಬಿಬಿಎಂಪಿಯು ಬೆಂಗಳೂರಿನ ಬನಶಂಕರಿಯಿಂದ ಕೆಂಗೇರಿಯ ತನಕ ಸಂಪರ್ಕ ಕಲ್ಪಿಸುವ 14.4 ಕಿ.ಮೀ ಉದ್ದದ ರಸ್ತೆಗೆ ಡಾ.ವಿಷ್ಣುವರ್ಧನ್ ರಸ್ತೆ ಎಂದು ನಾಮಕರಣ ಮಾಡಿತ್ತು. ಇದು ಓರ್ವ ಕಲಾವಿದನ ಹೆಸರಿನಲ್ಲಿ ನಾಮಕರಣ ಮಾಡಿರುವ ಭಾರತದಲ್ಲೇ ಅತಿ ಉದ್ದದ ರಸ್ತೆಯಾಗಿದೆ.

ಸ್ಮಾರಕ ನಿರ್ಮಾಣಕ್ಕೆ ಈ ಹಿಂದೆ ಬಿಎಸ್ ವೈ ಶಂಕುಸ್ಥಾಪನೆ :

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಹಿಂದೆ 2020ರ ಸೆಪ್ಟೆಂಬರ್ 15ರಂದು ವಿಷ್ಣುವರ್ಧನ್ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣುವರ್ಧನ್ ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತು ನಾಟಕಗಳ ಚಟುವಟಿಕೆ ನಡೆಸುವ ಕುರಿತು ವಿಷ್ಣು ಕುಟುಂಬಸ್ಥರು ಯೋಜನೆ ರೂಪಿಸಿದ್ದಾರೆ. ಸ್ಮಾರಕದಲ್ಲಿ ಕ್ಯಾಂಟಿನ್ ವ್ಯವಸ್ಥೆ ಮಾಡಲಾಗಿದೆ.

ಭಾನುವಾರದ ಡಾ.ವಿಷ್ಣು ಸ್ಮಾರಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ಜಿ.ಟಿ.ದೇವೇಗೌಡ, ನಟ ಹಾಗೂ ನಿರ್ದೇಶಕ ಅನಿರುದ್ದ್, ವಾರ್ತಾ ಇಲಾಖೆಯ ಆಯುಕ್ತರಾದ ಡಾ.ಹರ್ಷ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Bangalore Arts| ನಗರದ ಈ ಸ್ಥಳಕ್ಕೆ ನೀವು ಜ.29 ಒಳಗೆ ಭೇಟಿಕೊಟ್ಟರೆ ಅಪರೂಪದ ಕಲೆಯನ್ನು ವೀಕ್ಷಿಸಬಹುದು…!

Next Post

#Bharat  Jodo Yatra Finale | ಜಮ್ಮುಕಾಶ್ಮೀರದಲ್ಲಿ ಹಿಮಪಾತದ ಮಧ್ಯೆ ಭಾರತ ಜೋಡೋ ಯಾತ್ರೆ ಸಮಾರೋಪ

Next Post
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತದ ನಡುವೆಯೇ ಸೋಮವಾರ ನಡೆದ ಕಾಂಗ್ರೆಸ್ ಭಾರತ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ (ಚಿತ್ರ ಕೃಪೆ : ಕಾಂಗ್ರೆಸ್)

#Bharat  Jodo Yatra Finale | ಜಮ್ಮುಕಾಶ್ಮೀರದಲ್ಲಿ ಹಿಮಪಾತದ ಮಧ್ಯೆ ಭಾರತ ಜೋಡೋ ಯಾತ್ರೆ ಸಮಾರೋಪ

ಮೊಬೈಲ್ ರೆಕಾರ್ಡಿಂಗ್ ಸಾಂದರ್ಭಿಕ ಚಿತ್ರ

#AssemblyElection2023 | ಮತದಾರರಿಗೆ ಆಮಿಷ ಒಡ್ಡುವ ವಿಡಿಯೋ ಮಾಡಿ ಕಳಿಸಿದರೆ 5 ಸಾವಿರ ಇನಾಮು ; ಕೆಆರ್ ಎಸ್ ಪಕ್ಷದ ಓಪನ್ ಆಫರ್!!

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group