Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Turkey Earthquake Updates | ಟರ್ಕಿ ಭೂಕಂಪನದಿಂದ ನಲುಗಿದ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ

ಟರ್ಕಿ ಭೂಕಂಪನ ವಿಚಾರ ಸಂಬಂಧ, ಸಹಾಯ ಬೇಕಿದ್ದಲ್ಲಿ ತಕ್ಷಣ 080-22340676 ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು | ಆನ್ ಲೈನ್ ಕ್ಯಾಮರಾದಲ್ಲಿ ಸೆರೆಯಾಯ್ತು ಭೂಕಂಪನ ದೃಶ್ಯ

by Bengaluru Wire Desk
February 8, 2023
in News Wire, Public interest
Reading Time: 2 mins read
0
ಟರ್ಕಿಯ ಭೂಕಂಪನ ಪೀಡಿತ ಪ್ರದೇಶದ ದ್ರೋಣ್ ದೃಶ್ಯ

ಟರ್ಕಿಯ ಭೂಕಂಪನ ಪೀಡಿತ ಪ್ರದೇಶದ ದ್ರೋಣ್ ದೃಶ್ಯ

ಬೆಂಗಳೂರು, ಫೆ.08 www.bengaluruwire.com : ಟರ್ಕಿ (Turkey) ಹಾಗೂ ಸಿರಿಯಾ (Syria)ದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪ (Earthquake) ಹಾಗೂ ನಂತರ ಸಂಭವಿಸಿದ ಸುಮಾರು 200 ಕಂಪನಗಳ ಪರಿಣಾಮ ಎರಡೂ ರಾಷ್ಟ್ರಗಳಲ್ಲಿನ ಜನತೆ ಕೊರೆಯುವ ಚಳಿ, ಬಿದ್ದು ಹೋದ ಕಟ್ಟಡಗಳ ನಡುವೆ ಜೀವಿಸುವಂತಾಗಿದೆ. ಅಲ್ಲಿನ ಪರಿಸ್ಥಿತಿ ಶೋಚನೀಯವಾಗಿದೆ.

ಈ ಪ್ರಬಲ ಭೂಕಂಪದಿಂದ ಈಗಾಗಲೇ 7,800ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಭೂಸರ್ವೇಕ್ಷಣಾ ಇಲಾಖೆಯು ಎರಡೂ ರಾಷ್ಟ್ರಗಳ ಸಾವಿನ ಪ್ರಮಾಣ 11 ಸಾವಿರಕ್ಕೆ ಹೆಚ್ಚಬಹುದು ಎಂದು ಹೇಳಿದೆ. ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಈ ಸಾವಿನ ಸಂಖ್ಯೆ 20 ಸಾವಿರ ದಾಟಬಹುದು ಎಂದು ತಿಳಿಸಿದ್ದಾರೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ 1,80,000 ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರೂ ಮೃತಪಟ್ಟಿರಬಹುದು ಎಂದು ಅಂದಾಜು ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ, ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ (Karnataka Disaster Management Authority) ಫೆ.7ರಿಂದ ಸಹಾಯವಾಣಿ ಆರಂಭ ಮಾಡಿದೆ. ಘಟನೆಯ ಸಂಬಂಧ ರಾಜ್ಯ ಸರ್ಕಾರ ಭಾರತದ ರಾಯಭಾರಿ ಕಚೇರಿ ಜತೆ ನಿರಂತರ ಸಂಪರ್ಕದಲ್ಲಿದೆ. ನಿನ್ನೆಯಿಂದ ಸದ್ಯ ಇಲ್ಲಿ ತನಕ ಯಾವುದೇ ಕರೆ ಬಂದಿಲ್ಲ. ಕರೆ ಬಂದ ತಕ್ಷಣ ಅಗತ್ಯ ಸಹಾಯಕ್ಕೆ ತಯಾರಾಗಿದ್ದೇವೆ. ಟರ್ಕಿ ಭೂಕಂಪನ ವಿಚಾರ ಸಂಬಂಧ, ಯಾರಿಗಾದರೂ ಸಹಾಯ ಬೇಕಿದ್ದಲ್ಲಿ ತಕ್ಷಣ 080-22340676 ಸಹಾಯವಾಣಿ ನಂಬರ್​ಗೆ ಕರೆ ಮಾಡಿ ಅಥವಾ seockarnataka@gmail.com ಇಮೇಲ್ ಮುಖಾಂತರ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಭೂಕಂಪನದಿಂದ ಧರೆಗುರುಳಿದ ಕಟ್ಟಡ ಅವಶೇಷಗಳನ್ನು ರಸ್ತೆಯಿಂದ ತೆರವುಗೊಳಿಸುತ್ತಿರುವ ಚಿತ್ರ

ಪ್ರಧಾನಿ ನರೇಂದ್ರ ಮೋದಿಯ ನಿರ್ದೇಶನದ ಮೇರೆಗೆ ಸಿರಿಯಾಗೆ ಪರಿಹಾರ ಸಾಮಗ್ರಿ ಹಾಗೂ ಎರಡು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ ತಂಡಗಳೊಂದಿಗೆ ತರಬೇತಿ ಪಡೆದ ಶ್ವಾನ ದಳ, ಶೋಧ ಮತ್ತು ಪರಿಹಾರ ಕಾರ್ಯಚರಣೆಗೆ ಅಗತ್ಯವಾದ ವಸ್ತುಗಳನ್ನು ಹೊತ್ತು ಟರ್ಕಿಯ ದುರಂತ ಸ್ಥಳಕ್ಕೆ ಹೋಗಿದೆ. ಇದಲ್ಲದೆ ಭಾರತೀಯ ಸೇನಾಪಡೆಯು, ಮೂಳೆ ತಜ್ಞರು, ಶಸ್ತ್ರಚಿಕಿತ್ಸೆ ನಡೆಸುವ ವೈದ್ಯರು ಸೇರಿದಂತೆ ತಜ್ಞ ವೈದ್ಯರನ್ನು ಒಳಗೊಂಡ ವೈದ್ಯಕೀಯ ತಂಡವನ್ನು ಅಲ್ಲಿಗೆ ಕಳುಹಿಸಿಕೊಡಲಾಗಿದೆ. ಈ ತಂಡವು ತುರ್ತು ಚಿಕಿತ್ಸೆಗೆ ಅಗತ್ಯವಾದ ಎಕ್ಸ್ ರೇ, ವೆಂಟಿಲೇಟರ್, ಆಮ್ಲಜನಕ ಉತ್ಪಾದನಾ ಯಂತ್ರ, ಹೃದಯ ಮಿಡಿತ ವೀಕ್ಷಿಸುವ ಮಾನಿಟರ್ ಸೇರಿದಂತೆ ಹೊರಾಂಗಣದಲ್ಲಿ 30 ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲು ಅಗತ್ಯವಾದ ಸಮಾನು ಸರಂಜಾಮುಗಳೊಂದಿಗೆ ಅಲ್ಲಿಗೆ ತೆರಳಿದೆ. ಭಾರತದಿಂದ ನಿನ್ನೆ ರಾತ್ರಿಯೇ ಭಾರತೀಯ ವಾಯುಪಡೆಯ ವಿಮಾನದ ಮುಖಾಂತರ ಸಂತ್ರಸ್ತರ ನೆರವಿಗಾಗಿ ಪರಿಹಾರ ಸಾಮಗ್ರಿ, ಜೀವ ರಕ್ಷಣ ಔಷದಿಗಳು ಹಾಗೂ ತುರ್ತು ಔಷಧಿಗಳನ್ನು ಸಿರಿಯಾಗೆ ಕೊಂಡೊಯ್ದಿದೆ.

ಟರ್ಕಿಯಲ್ಲಿ 3 ತಿಂಗಳು ತುರ್ತು ಪರಿಸ್ಥಿತಿ ಘೋಷಣೆ :

ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ನಲುಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು, ಮೂರು ತಿಂಗಳ ತುರ್ತು ಪರಿಸ್ಥಿತಿ ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಭೂಕಂಪದಿಂದಾಗಿ ಕನಿಷ್ಠ 20,426 ಜನ ಗಾಯಗೊಂಡಿದ್ದಾರೆ ಮತ್ತು 5,775 ಕಟ್ಟಡಗಳು ಧರೆಗುರುಳಿವೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿದೆ.

ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಭೂಕಂಪನದಿಂದ ಸಿರಿಯಾದ ಅಲೆಪ್ಬೊ ಹಾಗೂ ಹಮಾನಗರ ಮತ್ತು ಟರ್ಕಿಯ ದಿಯಾರ್ ಬಕೀರ್ ವರೆಗೆ ಸಾವಿರಾರು ಕಟ್ಟಡಗಳು ಕುಸಿದು ಬಿದ್ದಿದೆ. ಟರ್ಕಿಯ ಗಡಿ ಪ್ರದೇಶದಲ್ಲಿ ಸುಮಾರು 6 ಸಾವಿರ ಕಟ್ಟಗಳು ಧರೆಗುರುಳಿದೆ. 24,400ಕ್ಕೂ ಹೆಚ್ಚು ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಟರ್ಕಿಯ ವಿಪತ್ತು ನಿರ್ವಹಣಾ ಏಜನ್ಸಿಯು ತಿಳಿಸಿದೆ.

ದಶಕದಲ್ಲೇ ಅತಿದೊಡ್ಡ ಭೂಕಂಪ :

ಸೋಮವಾರ ಟರ್ಕಿಯಲ್ಲಿ ಸಂಭವಿಸಿದ ಭೂಕಂಪವು ದಶಕದಲ್ಲೇ ಸಂಭವಿಸಿದ ಅತಿದೊಡ್ಡ ಪ್ರಾಕೃತಿಕ ವಿಕೋಪವಾಗಿದೆ ಎಂದು ಟರ್ಕಿ ದೇಶದ ಅಧ್ಯಕ್ಷರು ತಿಳಿಸಿದ್ದು, ಭೂಕಂಪ ಶಾಸ್ತ್ರಜ್ಞರು ಈ ಭೂಕಂಪ ಟರ್ಕಿಯಲ್ಲಿ ಈವರೆಗೆ ಸಂಭವಿಸಿದ ಭೂಕಂಪಗಳ ಪೈಕಿ ಅತಿ ದೊಡ್ಡದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತಕ್ಕೆ ಧನ್ಯವಾದ ತಿಳಿಸಿದ ಟರ್ಕಿ :

ಕಳೆದ 24 ಗಂಟೆಗಳಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ತತ್ತರಿಸಿರುವ ತನ್ನ ದೇಶದ ನೆರವಿಗೆ ಧಾವಿಸಿದ ಭಾರತಕ್ಕೆ ಟರ್ಕಿ ದೇಶ ಧನ್ಯವಾದವನ್ನು ಅರ್ಪಿಸಿದೆ. ದೇಶಕ್ಕೆ ಹಣವನ್ನು ಒದಗಿಸಿದ ಉದಾರತೆಗಾಗಿ ಭಾರತವನ್ನು ಕೊಂಡೊಡುತ್ತಾ,  ಭಾರತದಲ್ಲಿನ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ನವದೆಹಲಿಗೆ ಧನ್ಯವಾದ ಅರ್ಪಿಸಿದ್ದಾರೆ ಹಾಗೂ ಅಗತ್ಯ ಕಾಲದಲ್ಲಿ ನೆರವಿಗೆ ಬಂದವನೇ ನಿಜವಾಗಿಯೂ ಸ್ನೇಹಿತ ಎಂದು ಹೇಳಿದ್ದಾರೆ.

ಆನ್ ಲೈನ್ ಕ್ಯಾಮರಾದಲ್ಲಿ ಸೆರೆಯಾಯ್ತು ಭೂಕಂಪನ ದೃಶ್ಯ :

ಟರ್ಕಿಯಲ್ಲಿ ಭೂಕಂಪನ ಸಂಭವಿಸುವ ಸಂದರ್ಭದಲ್ಲಿ ಕುಟುಂಬವೊಂದು ಮನೆಯೊಳಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯ ಆನ್ ಲೈನ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.

https://twitter.com/Shahid0968/status/1623158229642661888?s=20&t=9KzpT0ZCM2APjCQS9TFIlw
WhatsApp Join our WhatsApp Channel
Previous Post

BW SPECIAL | #AirShow 2023 | ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ವಿಪತ್ತು ನಿರ್ವಹಣೆಗೆ ಹೈಟೆಕ್ ಭೌಗೋಳಿಕ ತಂತ್ರಜ್ಞಾನ ವ್ಯವಸ್ಥೆ

Next Post

BBMP News | ಹಲವು ಬೇಡಿಕೆ ಈಡೇರಿಕೆಗೆ ಪಾಲಿಕೆ ಅಧಿಕಾರಿ ನೌಕರರ ಸಂಘದ ಆಗ್ರಹ : ಬಿಬಿಎಂಪಿ ಕಚೇರಿಗಳು ಬಂದ್

Next Post

BBMP News | ಹಲವು ಬೇಡಿಕೆ ಈಡೇರಿಕೆಗೆ ಪಾಲಿಕೆ ಅಧಿಕಾರಿ ನೌಕರರ ಸಂಘದ ಆಗ್ರಹ : ಬಿಬಿಎಂಪಿ ಕಚೇರಿಗಳು ಬಂದ್

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಬಿಬಿಎಂಪಿ ಬಜೆಟ್ ಕುರಿತ ಸಲಹಾ ಸೂಚನಾ ಸಭೆಯ ಚಿತ್ರ

BW SPECIAL | BBMP Budget 2023-24 | ಬೆಂಗಳೂರಿನ ಬಜೆಟ್ ಸಲಹಾ ಸಭೆಗೆ ಬೆರಳೆಣಿಕೆ ಜನಪ್ರತಿನಿಧಿಗಳಷ್ಟೇ ಹಾಜರ್! ಇದರ ಹಿಂದಿನ ಕಾರಣ ಏನ್ ಗೊತ್ತಾ?

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group