Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Budget 2023-24 | ರಾಜ್ಯ ಸರ್ಕಾರ ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ.

ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ, ಶಿ- ಟಾಯ್ಲೆಟ್ | 1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ | ಬೆಂಗಳೂರಿನಲ್ಲಿ ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಗಳ ಯೋಜನೆ

by Bengaluru Wire Desk
March 1, 2023
in Bengaluru Focus, News Wire
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಫೆ.17 www.bengaluruwire.com : ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ 2023-24ರ ಆಯವ್ಯಯದಲ್ಲಿ ಒಟ್ಟಾರೆ 9,698 ಕೋಟಿ ರೂ. ಹಣ ನೀಡಲಾಗಿದೆ.

ರಾಜಧಾನಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಸಿಕ್ಕಿರುವುದೇನು? :
• ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ.

• ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಕಾಮಗಾರಿಗಳನ್ನು ಕಾರಿಡಾರ್ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

• ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.

• ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ Integrated ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು.

• 1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್‌-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.

• ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300 ಕೋಟಿ ರೂ. ಒದಗಿಸಲಾಗುವುದು.

• ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

• ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀ.ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೊಜಿಸಲಾಗಿದೆ.

• ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿ.ಮೀ. ಉದ್ದದ 31 ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತ್ರತ ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದಕ್ಕೆ 16,328 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮತಿ ದೊರಕಿದ ನಂತರ ಕಾಮಗಾರಿಗಳನ್ನು ಪಾರಂಭಿಸಲಾಗುವುದು.

ಬೆಂಗಳೂರು ಸಂಚಾರ ದಟ್ಟಣೆ ಸಾಂದರ್ಭಿಕ ಚಿತ್ರ

*ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ Satellite Town Ring Road ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.

• ಬೆಂಗಳೂರು ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ (BSRP) ಬೆಂಗಳೂರು ರೈಲ್ವೆ ಮಂತ್ರಾಲಯವು 15,767 ಕೋಟಿ ರೂ. ವೆಚ್ಚದಲ್ಲಿ ಮೊದಲನೇ ಹಂತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, 2024-25ನೆ ವರ್ಷದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು, ಈ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 1,350 ಕೋಟಿ ರೂ. ಗಳು ಹಾಗೂ ರಾಜ್ಯ ಸರ್ಕಾರದಿಂದ 1,000 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.

• ಬೆಂಗಳೂರು ಉಪನಗರ ರೈಲು ಯೋಜನೆಯ ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ನಡುವಿನ ಕಾರಿಡಾರ್-2ರ ವಯಾ-ಡಕ್ಟ್ ಕಾಮಗಾರಿಗಳಿಗೆ 860 ಕೋಟಿ ರೂ. ಮೊತ್ತಕ್ಕೆ ಕಾರ್ಯಾದೇಶ ನೀಡಿದ್ದು, ಕಾಮಗಾರಿಗಳು ಪ್ರಾರಂಭವಾಗಿದೆ.

• ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಹಲವಾರು ಸಂಸ್ಥೆಗಳ ಕಾರ್ಯಾಚರಣೆಯನ್ನು ಸಮನ್ವಯಿಸಲು ಉನ್ನತಾಧಿಕಾರದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರವನ್ನು ರಚಿಸಲಾಗಿದೆ.

• ಹವಾಮಾನ ಬದಲಾವಣೆಯ ಪರಿಣಾಮವನ್ನು ಕಡಿಮೆ ಮಾಡಲು ಮತ್ತು ಬೆಂಗಳೂರಿನಲ್ಲಿ ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಗಳ ಯೋಜನೆಯನ್ನು ವಿಶ್ವಬ್ಯಾಂಕ್‌ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲಾ ಕೆರೆಗಳಿಗೆ Sluice Gateಗಳನ್ನು ಅಳವಡಿಸಲಾಗುವುದು. ಇದರಿಂದ ನೀರಿನ ಹರಿವಿನ ವೇಗ ಮತ್ತು ಪ್ರಮಾಣವನ್ನು ನಿಯಂತ್ರಿಸಲು ಅನುಕೂಲವಾಗಿದೆ.

ವಿಧಾನಸೌಧದ ಸಾಂದರ್ಭಿಕ ಚಿತ್ರ

50 ಲಕ್ಷ ಜನರಿಗೆ ಕಾವೇರಿ ಕುಡಿಯುವ ನೀರು :
• ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಗಳನ್ನು 5,550 ಕೋಟಿ ರೂ. ಅಂದಾಜು ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ತೆಗೆದುಕೊಂಡಿದ್ದು, ಎಲ್ಲಾ ಕಾಮಗಾರಿಗಳು 2023-24ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು, 775 ಎಂ.ಎಲ್‌.ಡಿ ಸಾಮರ್ಥ್ಯ ಹೊಂದಿರುವ ಈ ಯೋಜನೆಯನ್ನು ಪೂರ್ಣಗೊಳಿಸುವುದರಿಂದ ನಗರದ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನೆರವಾಗಲಿವೆ.

110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕೆ 200 ಕೋಟಿ ರೂ. :
• ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು ಅನುಷ್ಠಾನಗೊಳಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ರಾಜ್ಯ ಸರ್ಕಾರದ ವತಿಯಿಂದ 200 ಕೋಟಿ ರೂ. ಆರ್ಥಿಕ ನೆರವು ನೀಡಲಾಗುವುದು.

ನಗರದಲ್ಲಿ ಸಂಪೂರ್ಣವಾಗಿ ತ್ಯಾಜ್ಯ ನೀರು ಸಂಸ್ಕರಣೆ :
• ಪ್ರಸ್ತುತ ಬೆಂಗಳೂರು ನಗರದಲ್ಲಿ 1,850 ಎಂ.ಎಲ್.ಡಿ (ದಶಲಕ್ಷ ಲೀ.) ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು, ಇದರಲ್ಲಿ 1,500 ಎಂ.ಎಲ್.ಡಿ. ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ. ಹೆಚ್ಚುವರಿಯಾಗಿ 350 ಎಂ.ಎಲ್‌.ಡಿ. ಸಾಮರ್ಥ್ಯವನ್ನು ಒದಗಿಸುವುದರೊಂದಿಗೆ ಸಂಪೂರ್ಣ ತ್ಯಾಜ್ಯ ನೀರನ್ನು ಸಂಸ್ಕರಿಸಲಾಗುವುದು.

• ಮೆಗಾಸಿಟಿ ರಿವಾಲ್ವಿಂಗ್ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಗಳನ್ನು 1,200 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗಿದೆ.

ಒಂದೇ ಆಟೊ ಟಿಪ್ಪರ್ ನಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹ :

• ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರುಗಳು ಹಾಗೂ ಆಯವ್ಯಯ 2023-24ರಲ್ಲಿ ಕಾಂಪಾಕ್ಟರುಗಳು ಕಾರ್ಯಾಚರಣೆ ಮಾಡಲಿವೆ. ಆಯಾ ವಾರ್ಡ್‌ ಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಪ್ರತಿ ವಾರ್ಡ್‌ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆ ರಹಿತ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

• ವಾಣಿಜ್ಯ ಮಳಿಗೆಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದನ್ನು ಕಡ್ಡಾಯಗೊಳಿಸುವ ಮೂಲಕ ಸ್ಥಳೀಯವಾಗಿಯೇ ತ್ಯಾಜ್ಯ ಸಂಸ್ಕರಣೆಗೆ ಒತ್ತು ನೀಡಲಾಗುವುದು.

• ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್ (Smart Virtual Clinic ಗಳನ್ನು ಅನುಮೋದಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ. ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು “ಬೆಂಗಳೂರು ಹೆಲ್ತ್ ಸಿಸ್ಟಮ್ಸ್” ಎಂದು ಪುನರ್ ರಚನೆ ಮಾಡಲು ಉದ್ದೇಶಿಸಲಾಗಿದೆ.

• 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿದ್ದ 20 ಬೆಂಗಳೂರು ಪಬ್ಲಿಕ್ ಶಾಲೆಗಳನ್ನು ಕಾರ್ಯಗತಗೊಳಿಸಲಾಗಿದೆ. ಮುಂದುವರೆದು, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ. ಗಳ ವೆಚ್ಚದಲ್ಲಿ ಯೋಜನೆಗಳನ್ನು ತಯಾರಿಸಿದ್ದು, ಈ ಕಾಮಗಾರಿಗಳನ್ನು 2023-24 ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

ವಾರ್ಷಿಕ ಸಸಿ ನೆಡುವ ಪ್ರಮಾಣ ವಾರ್ಷಿಕ 15 ಲಕ್ಷ ಸಸಿಗಳಿಗೆ ಏರಿಕೆ :
• ಬೆಂಗಳೂರಿನಲ್ಲಿ 2022-23 ರವರೆಗೆ, ಪ್ರತಿ ವರ್ಷ ಸುಮಾರು 10 ಲಕ್ಷ ಸಸಿಗಳನ್ನು ನೆಡಲಾಗಿದೆ. 2023-24 ರಿಂದ ಇದನ್ನು ವರ್ಷಕ್ಕೆ 15 ಲಕ್ಷ ಸಸಿಗಳಿಗೆ ಹೆಚ್ಚಿಸಲಾಗುವುದು ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ 3 ಹೊಸ ಹೈಟೆಕ್ ನರ್ಸರಿಗಳನ್ನು – ಸ್ಥಾಪಿಸಲು ಉದ್ದೇಶಿಸಿದೆ.

• ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್‌ಗಳ ಅಳವಡಿಕೆ ಮತ್ತು GPS ತಂತ್ರಾಂಶದ ಮುಖಾಂತರ ಕಣ್ಗಾವಲು ಕ್ರಮ ಕೈಗೊಳ್ಳಲಾಗುವುದು.

ನಿರ್ಭಯ ಯೋಜನೆಗೆ 261 ಕೋಟಿ ರೂ. ಅನುದಾನ :
• ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ ‘The Safe City Project’ ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 1,640 ಸ್ಥಳಗಳಲ್ಲಿ 4,100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಕ್ಯಾಮರಾಗಳನ್ನು Integrated Control and Command Centreಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ ಮೇಲೆ ನಿಗಾವಹಿಸಲಾಗುತ್ತಿದೆ. ಈ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸುವ ಸಲುವಾಗಿ 261 ಕೋಟಿ ರೂ. ಅನುದಾನವನ್ನು ನೀಡಲಾಗುವುದು.

ಶಿ- ಟಾಯ್ಲೆಟ್ ಎಂಬ ಮಹಿಳಾ ಯೋಜನೆ :
• ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ, ಶಿ ಟಾಯ್ಲೆಟ್ (‘She Toilet’) ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು.

WhatsApp Join our WhatsApp Channel
Previous Post

Karnataka Budget 2023-24 | ಚುನಾವಣಾ ವರ್ಷದಲ್ಲಿ ರಾಜ್ಯಕ್ಕೆ 3.09 ಲಕ್ಷ ಕೋಟಿ ರೂ. ಮಿಗತೆಯ ಬಜೆಟ್

Next Post

Bengaluru News| ಬೆಂಗಳೂರಿನ 110 ಹಳ್ಳಿಗಳ ಒಳಚರಂಡಿ ಪೈಪ್ ಅಳವಡಿಕೆ ಕಾರ್ಯ ಶೇ.98 ರಷ್ಟು ಪೂರ್ಣ…!

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

Bengaluru News| ಬೆಂಗಳೂರಿನ 110 ಹಳ್ಳಿಗಳ ಒಳಚರಂಡಿ ಪೈಪ್ ಅಳವಡಿಕೆ ಕಾರ್ಯ ಶೇ.98 ರಷ್ಟು ಪೂರ್ಣ…!

ಹಿರಿಯ ಕೆಎಎಸ್ ಅಧಿಕಾರಿ ವಿ.ಆರ್.ಶೈಲಜಾ (ಎಡಚಿತ್ರ), ಸಂಸದ ಪ್ರತಾಪ್ ಸಿಂಹ (ಬಲಚಿತ್ರ) - ಪ್ರಾತಿನಿಧಿಕ ಚಿತ್ರ

KAS Officers | ಕೆಎಎಸ್ ಅಧಿಕಾರಿ ಶೈಲಜಾ ಹಾಗೂ ಆ ಹುದ್ದೆಯ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ : ಹೇಳಿಕೆ ಹಿಂಪಡೆಯಲು ಸಂಸದ ಪ್ರತಾಪ್ ಸಿಂಹಗೆ ಆಗ್ರಹ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group