Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Lokayukta Complaint | “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಗಣ್ಯರ ಆತಿಥ್ಯಕ್ಕಾಗಿ 200 ಕೋಟಿ ರೂ. ಲೂಟಿ ” : ಲೋಕಾಯುಕ್ತಕ್ಕೆ ದೂರು

2013-14ರಿಂದ 2017-18ರ ಅವಧಿಯಲ್ಲಿ ಸಿಎಂ ಕಚೇರಿ ಹಾಗೂ ಡಿಎಪಿಆರ್ ಕಚೇರಿಯಲ್ಲಿ ಸಭೆ, ಗಣ್ಯರ ಆತಿಥ್ಯದ ಹೆಸರಿನಲ್ಲಿ ನಕಲಿ ದಾಖಲೆ ತಯಾರಿಸಿ ಹಣ ಲೂಟಿ ಆರೋಪ |ಆಗಿನ ಸಿಎಂ ಸಿದ್ದರಾಮಯ್ಯ, ಡಿಎಪಿಆರ್ ಇಬ್ಬರು ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರದಲ್ಲಿ ದೂರು ದಾಖಲಿಸಿದ ಬಿಜೆಪಿ ಮುಖಂಡ ಎನ್.ಆರ್.ರಮೇಶ್

by Bengaluru Wire Desk
March 6, 2023
in News Wire
Reading Time: 1 min read
0
ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಆರೋಪ ಮಾಡುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್.

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಆರೋಪ ಮಾಡುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್.

ಬೆಂಗಳೂರು, ಮಾ.6 www.bengaluruwire.com : “ಕಾಂಗ್ರೆಸ್ ಹಿರಿಯ ಮುಖಂಡ ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಅವರ ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR)ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ಕೇವಲ ಕಾಫೀ ತಿಂಡಿ, ಬಿಸ್ಕೆಟ್‍ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ಲೋಕಾಯುಕ್ತದಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.

“2013-14 ರಿಂದ 2017-18 ರವರೆಗಿನ 05 ವರ್ಷಗಳ ಅವಧಿಯಲ್ಲಿ  ಮುಖ್ಯಮಂತ್ರಿಗಳ ಕಛೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಛೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳು ಹಾಗೂ ಗಣ್ಯರ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 (200,62,93,027 ರೂ.) ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ. ಈ ಬಗ್ಗೆ ಲೋಕಾಯುಕ್ತದಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ, ಡಿಎಪಿಆರ್ ನ ಪ್ರಧಾ ಕಾರ್ಯದರ್ಶಿಗಳಾಗಿದ್ದ ಎಲ್.ಕೆ.ಅತೀಕ್, ಡಾ.ಡಿ.ವಿ.ರಮಣರೆಡ್ಡಿ ಅವರ ವಿರುದ್ಧ ದೂರು ದಾಖಲಿಸಿದ್ದೇನೆ” ಎಂದು ಮಾಧ್ಯಮದವರಿಗೆ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು ಆರ್ ಟಿಐ ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಆಘಾತಕಾರಿ ಮಾಹಿತಿಗಳು ಬಯಲಾಗಿದೆ. 5 ವರ್ಷಗಳಲ್ಲಿನ 1,825 ದಿನಗಳಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ಪ್ರತಿಯೊಂದು ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. 410 ರಜಾ ದಿನಗಳನ್ನು ಹೊರತುಪಡಿಸಿದರೆ ಪ್ರತಿಯೊಂದು ದಿನಕ್ಕೆ ಸರಾಸರಿ 14 ಲಕ್ಷ ರೂಪಾಯಿ ವೆಚ್ಚ ಮಾಡಿರೋದು ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

ಆರ್ ಟಿಐ ಅಧಿಕೃತ ದಾಖಲೆಗಳು ಹೇಳುವಂತೆ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ ಅಂದಿನ ಮುಖ್ಯಮಂತ್ರಿಗಳ ಕಛೇರಿಯ ಸಭೆಗಳು ಮತ್ತು ಅತಿಥಿ – ಗಣ್ಯರ ಉಪಚಾರಗಳಿಗೆಂದು ವೆಚ್ಚ ಮಾಡಿರುವ ವರ್ಷಾವಾರು ವಿವರ ಈ ಕೆಳಕಂಡಂತಿದೆ.

ವರ್ಷಅತಿಥಿಗಳು- ಸಭೆಗಳಿಗೆ ಮಾಡಿರುವ ವೆಚ್ಚ
2013-14 :₹.  36,03,03,078/-
2014-15 :₹.  38,26,68,575/-
2015-16 :₹.  36,66,19,743/-
2016-17  :₹.  44,73,92,077/-
2017-18  :₹.  44,93,09,554/-
ಒಟ್ಟು₹.  200,62,93,027/-

ಇದು ಕೇಳಲು ಹಾಸ್ಯ ಪ್ರಸಂಗದಂತಿದ್ದರೂ ಸಹ ದಾಖಲೆಗಳು ಅಸಲೀ ಸತ್ಯವನ್ನು ಬಿಚ್ಚಿಡುತ್ತಿವೆ. ಈ ನಂಬಲಸಾಧ್ಯವಾದಂತಹ ದಾಖಲೆಗಳಿಂದ 2013-14 ರಿಂದ 2017-18 ರವರೆಗಿನ 5 ವರ್ಷಗಳಲ್ಲಿ ನಕಲಿ ದಾಖಲೆಗಳನ್ನು ತಯಾರಿಸಿ ಒಟ್ಟು ₹. 200,62,93,027/- ಗಳನ್ನು ಲೂಟಿ ಮಾಡಿರುವುದು ಬಟಾಬಯಲಾಗಿದೆ. ಅಂದಿನ ಮುಖ್ಯಮಂತ್ರಿಗಳ ಕಛೇರಿಯ ಈ ನಂಬಲ ಸಾಧ್ಯವಾದ ವೆಚ್ಚಗಳ ಬಗ್ಗೆ ರಾಜ್ಯದ ಪ್ರಧಾನ ಲೆಕ್ಕಾಧಿಕಾರಿಗಳ ಕಚೇರಿ (Office of the Principal Accountant General, Karnataka) ರವರು ನೀಡಿರುವ ಲೆಕ್ಕ ಪರಿಶೋಧನಾ ವರದಿಯಲ್ಲಿ ಈ ಬಗ್ಗೆ ತಮ್ಮ ತೀವ್ರ ಆಕ್ಷೇಪಣೆಗಳನ್ನು ಅತ್ಯಂತ ಸ್ಪಷ್ಟವಾಗಿ ದಾಖಲಿಸಿದ್ದಾರೆ ಎಂದು ಎನ್.ಆರ್.ರಮೇಶ್ ದೂರಿದ್ದಾರೆ.

ಕಳೆದ 75 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 25 ಮಂದಿ ಮುಖ್ಯಮಂತ್ರಿಗಳ ಪೈಕಿ, ಬೇರೆ ಇನ್ಯಾವ ಮುಖ್ಯಮಂತ್ರಿಗಳ ಅವಧಿಯಲ್ಲೂ ಸಹ ನಡೆಯದ “ಅತಿಥಿ ಉಪಚಾರ”ದ ಹೆಸರಿನ ಇಂತಹ ಭ್ರಷ್ಟಾಚಾರ ಸಿದ್ಧರಾಮಯ್ಯನವರ ಅವಧಿಯಲ್ಲಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾ.6ರಂದು ದಾಖಲಾಗಿರುವ ದೂರಿನ ಪ್ರತಿ

ಹಾಸಿಗೆ – ದಿಂಬು, ಇಂದಿರಾ ಕ್ಯಾಂಟೀನ್ (Indira Canteen) ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು ಎಲ್ ಇಡಿ (LED) ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ ಕೇವಲ ಮುಖ್ಯಮಂತ್ರಿಗಳ ಕಛೇರಿಯ ಕಾರ್ಯಗಳಿಗೆ ಕಾಫೀ – ತಿಂಡಿ – ಬಿಸ್ಕೇಟ್ ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವುದನ್ನು ನೋಡಿದರೆ, ಇಂತಹ ಬೃಹತ್ ಭ್ರಷ್ಟಾಚಾರಗಳ ಸರ್ಕಾರ ದೇಶದಲ್ಲಿ ಮತ್ತೊಂದಿಲ್ಲ ಎಂದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಕಿಡಿಕಾರಿದ್ದಾರೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಎ (CBI) ಅಥವಾ ಸಿಐಡಿ (CID) ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿಗಳನ್ನು ಸೂಕ್ತ ದಾಖಲೆಗಳೊಂದಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

BIS HUID 6 Digit | ಏ.1ರಿಂದ ಕಳಪೆ ಚಿನ್ನಾಭರಣ ಮಾರಾಟ ಸಾಧ್ಯವಿಲ್ಲ : ಕಳುವಾಗುವ ಚಿನ್ನಾಭರಣ ಪತ್ತೆ ಸುಲಭ !! – ಎಚ್ ಯುಐಡಿ ಕೋಡ್ ಇರುವ ಚಿನ್ನಾಭರಣ ಮಾರಾಟಕ್ಕೆ ಅವಕಾಶ  

Next Post

Health News | H3N2 ವೈರಸ್‌ ಸೋಂಕು : ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

Next Post
ರಾಜ್ಯದಲ್ಲಿ ಕಂಡು ಬಂದಿರುವ ಎಚ್3ಎನ್2 ವೈರಸ್ ಕುರಿತಂತೆ ಸೋಮವಾರ ಬೆಂಗಳೂರಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಹಿರಿಯ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ  ಆಯುಕ್ತರಾದ ಡಿ.ರಂದೀಪ್ ಕೂಡ ಜೊತೆಗಿದ್ದರು.

Health News | H3N2 ವೈರಸ್‌ ಸೋಂಕು : ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ - ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಸಚಿವ ವಿ.ಸುನಿಲ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೆಶಕ ಮಹಾಂತೇಶ ಬೀಳಗಿ ಮತ್ತಿತರರು ಚಿತ್ರದಲ್ಲಿದ್ದಾರೆ.

ENERGY NEWS | ಪವರ್ ಜೊತೆ ʼಪವರ್‌ ಪಾಲಿಟಿಕ್ಸ್‌ʼ ಬೇಡ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group