Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Congress In Magadi | ಮಾಗಡಿಯಲ್ಲಿ ಪ್ರತಿಧ್ವನಿಸಿದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಮೇ.15ರ ವೇಳೆಗೆ ಸರ್ಕಾರ ರಚನೆಯಾಗಲಿದ್ದು, ಜೂನ್ ತಿಂಗಳಿಂದಲೇ ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನಿಸಲಾಗುವುದು - ಡಿಕೆಶಿ

by Bengaluru Wire Desk
March 10, 2023
in News Wire
Reading Time: 1 min read
0
ಸೇಬಿನ ಹಣ್ಣಿನ ಹಾರ ಹಾಕಿ ಅಭಿಮಾನದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬರಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಸೇಬಿನ ಹಣ್ಣಿನ ಹಾರ ಹಾಕಿ ಅಭಿಮಾನದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬರಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಾಗಡಿ, ಮಾ.10 www.bengaluruwire.com : ಬಿಜೆಪಿ ಸರ್ಕಾರ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿತ್ತು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. 1 ಲಕ್ಷವರೆಗಿನ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಈ ಯಾವ ಭರವಸೆಯನ್ನು ಬಿಜೆಪಿ ಸರಕಾರ ಈಡೇರಿಸಲಿಲ್ಲ. ಈ ಸರ್ಕಾರ ಕೊಟ್ಟ 600 ಭರವಸೆಗಳಲ್ಲಿ ಕೇವಲ 50 ಭರವಸೆ ಈಡೇರಿಸಿದ್ದು, 550 ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಮಾಗಡಿ ವಿಧಾನಸಭೆ ಕ್ಷೇತ್ರದ ಜಾಲಮಂಗಲದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ನಿಮ್ಮ ನೋವು, ಕಷ್ಟಗಳಿಗೆ ಪರಿಹಾರ ನೀಡಲು ನಾವು ಈ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ಮಾಡಿದ ಬಿಜೆಪಿ 600 ಭರವಸೆ ನೀಡಿತ್ತು. ಆದರೆ 550 ಈಡೇರಿಲ್ಲ ಎಂದರು.

ಇಂದಿನ ಪ್ರಜಾಧ್ವನಿ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿರುವುದು ಬಹಳ ಸಂತೋಷ ತಂದಿದೆ. ನನ್ನ ಸ್ನೇಹಿತರಾದ ಕಾಂತರಾಜ್ ಪಟೇಲ್, ಪುಟ್ಟಸ್ವಾಮಿ ಗೌಡ, ನಾರಾಯಣ ಅವರನ್ನು ಸ್ಮರಿಸುತ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಬೇರು ಇಲ್ಲದಿದ್ದರೆ ಮರ ಉಳಿಯಲ್ಲ, ಅದೇ ರೀತಿ ನಂಬಿಕೆ ಇಲ್ಲದಿದ್ದರೆ ಸಂಬಂಧ ಉಳಿಯುವುದಿಲ್ಲ. ನಮ್ಮ ಮೇಲೆ ನಂಬಿಕೆ ಇಟ್ಟು ಇಲ್ಲಿ ಬಂದಿರುವ ಎಲ್ಲರಿಗೂ ಧನ್ಯವಾದ ಎಂದು ಹೇಳಿದರು.

ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 80 ಹಾಗೂ ಜೆಡಿಎಸ್ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು. ನಾವು ಜೆಡಿಎಸ್ ಪಕ್ಷಕ್ಕೆ ಬೇಷರತ್ತಾಗಿ ಬೆಂಬಲ ನೀಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ನಂತರ ರೈತರ ಸಾಲಮನ್ನಾ ಮಾಡಲು ನಾವು ಕುಮಾರಸ್ವಾಮಿ ಅವರಿಗೆ ಬೆಂಬಲವಾಗಿ ನಿಂತೆವು. ಈ ಹಿಂದೆ ಸಿದ್ದರಾಮಯ್ಯ ಅವರ ಕಾಲದಲ್ಲೂ 50 ಸಾವಿರವರೆಗಿನ ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು.

ಮಾಗಡಿ ವಿಧಾನಸಭೆ ಕ್ಷೇತ್ರದ ಜಾಲಮಂಗಲದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡ ಜನಸ್ತೋಮ

ಬಿಜೆಪಿ ಅಧಿಕಾರಕ್ಕೆ ಬಂದು ಉಚಿತ ಅಕ್ಕಿ 5 ಕೆಜಿಗೆ ಇಳಿಕೆ :

ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ ಅಕ್ಕಿ  ಉಚಿತವಾಗಿ ನೀಡಿದೆವು. ನಂತರ ಇದನ್ನು 7 ಕೆ.ಜಿ.ಗೆ ಹೆಚ್ಚಳ ಮಾಡಿದೆವು. ಆದರೆ ಬಿಜೆಪಿ ಸರ್ಕಾರ ಇದನ್ನು 5 ಕೆ.ಜಿಗೆ ಇಳಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬಡವರ ಕುಟುಂಬಗಳನ್ನು ಉಳಿಸಬೇಕು ಎಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದನ್ನು 10 ಕೆ.ಜಿ.ಗೆ ಹೆಚ್ಚಿಸಲಾಗುವುದು. ಆ ಮೂಲಕ ಹಸಿವುಮುಕ್ತ ರಾಜ್ಯ ನಿರ್ಮಾಣಕ್ಕೆ ಪಣತೊಟ್ಟಿದ್ದೇವೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರೂ ಇಂತಹ ಯೋಜನೆ ಜಾರಿ ಮಾಡಲಿಲ್ಲ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಬಂದರೆ ನುಡಿದಂತೆ ನಡೆಯುತ್ತಾರೆ ಎಂದು ನೀವೆಲ್ಲರೂ ನಂಬಿಕೆ ಇಟ್ಟಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.

ಅಧಿಕಾರಕ್ಕೆ ಬಂದ ಕೂಡಲೇ ಯೋಜನೆ ಜಾರಿಗೆ ಪ್ರಯತ್ನ :

ಹೆಣ್ಣು ಕುಟುಂಬದ ಕಣ್ಣು, ಆಕೆಗೆ ಶಕ್ತಿ ನೀಡಬೇಕು. ಬೆಲೆ ಏರಿಕೆಯಿಂದ ಮಹಿಳೆಯರು ತಮ್ಮ ಸಂಸಾರ ನಿಭಾಯಿಸುವುದೇ ಕಷ್ಟವಾಗಿದೆ. ಆದಾಯ ಪಾತಾಳಕ್ಕೆ ಕುಸಿದಿದ್ದು, ವಸ್ತುಗಳ ಬೆಲೆ ಗಗನಕ್ಕೇರಿದೆ. ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಈ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2000 ರೂ. ನಂತೆ ವರ್ಷಕ್ಕೆ 24 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಇದರ ಜತೆಗೆ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆ ಮೂಲಕ ಪ್ರತಿ ತಿಂಗಳು 1500ರಂತೆ ವರ್ಷಕ್ಕೆ 18 ಸಾವಿರ ಉಳಿತಾಯ ಮಾಡಬಹುದು. ಈ ಎರಡು ಯೋಜನೆಗಳ ಮೂಲಕ ವರ್ಷಕ್ಕೆ 42 ಸಾವಿರದಂತೆ ಐದು ವರ್ಷಕ್ಕೆ 2.10 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ನಾನು ಇಂಧನ ಸಚಿವನಾದಾಗ ರಾಜ್ಯದಲ್ಲಿ 10 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಇತ್ತು. ನಾನು ಸಚಿವ ಸ್ಥಾನದಿಂದ ಕೆಳಗೆ ಇಳಿಯುವ ಹೊತ್ತಿಗೆ 20 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುವಂತೆ ಮಾಡಿದೆ.

ಈ ಯೋಜನೆಗಳ ಕುರಿತು ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಕಾರ್ಡ್ ಗೆ ಸಹಿ ಮಾಡಿದ್ದು, ಈ ಕಾರ್ಡ್ ಅನ್ನು ನೀವು ಪ್ರತಿ ಮನೆ ಮನೆಗೆ ತಲುಪಿಸಬೇಕು. ಮೇ.15ರ ವೇಳೆಗೆ ಸರ್ಕಾರ ರಚನೆಯಾಗಲಿದ್ದು, ಜೂನ್ ತಿಂಗಳಿಂದಲೇ ಈ ಯೋಜನೆ ಜಾರಿಗೆ ನಾವು ಪ್ರಯತ್ನಿಸುತ್ತಿದ್ದೇವೆ. ಇಲ್ಲಿರುವ ನೀವುಗಳು ನಿಮ್ಮ ಮನೆಯವರು ಹಾಗೂ ಸಂಬಂಧಿಗಳು, ಅಕ್ಕಪಕ್ಕದ ಮನೆಯವರು ಸೇರಿದಂತೆ ಒಬ್ಬೊಬ್ಬರು ನಾಲ್ಕೈದು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಹಾಕಿಸಬೇಕು.

ಪಿಎಸ್ಐ ಹುದ್ದೆ ಪಡೆಯಲು ಹಣ ನೀಡಿ ಜೈಲು ಸೇರಿದ ಯುವಕರು :

ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿದೆ. ನಿಮ್ಮ ಕ್ಷೇತ್ರದಲ್ಲಿ ಕೆಲವು ಯುವಕರು ಪಿಎಸ್ಐ ಹುದ್ದೆ ಪಡೆಯಲು ಹಣ ನೀಡಿ ಜೈಲು ಸೇರಿ ಅವರ ಬದುಕು ನಾಶ ಮಾಡಿಕೊಂಡಿದ್ದಾರೆ. ನಮ್ಮ ಕಾಲದಲ್ಲಿ ನಾವು ಯಾರ ಬಳಿಯಾದರೂ ಹಣ ಪಡೆದು ಈ ರೀತಿ ಬದುಕು ನಾಶ ಮಾಡಿದ್ದೆವಾ? ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ ಎಂದು ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಹರಿಹಾಯ್ದರು.

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ” ಎಂದು ಚಿತ್ರದ ಸಂಭಾಷಣೆಯಂತೆ ಮಾತಿನ ಧಾಟಿಯಲ್ಲಿ ಹೇಳುತ್ತಾ, “ನೀವು ಕೈ ಜತೆ ಕೈ ಜೋಡಿಸಬೇಕು ಎಂದು ಪ್ರಾರ್ಥಿಸುತ್ತೇನೆ. ಈ ಕ್ಷೇತ್ರದಲ್ಲಿ ಬಾಲಕೃಷ್ಣ ಅವರು ಮಾತ್ರ ಪಕ್ಷದ ಟಿಕೆಟ್ ಗೆ ಅರ್ಜಿ ಹಾಕಿದ್ದು, ನೀವೆಲ್ಲರೂ ಅವರನ್ನು ಗೆಲ್ಲಿಸಿ ವಿಧಾನ ಸೌಧದಲ್ಲಿ ಕೂರಿಸಿ ನಮಗೆ ಶಕ್ತಿ ನೀಡಬೇಕು” ಎಂದು ತಮ್ಮ ಎಂದಿನ ಶೈಲಿಯಲ್ಲಿ ಹೇಳಿದಾಗ ವೇದಿಕೆ ಮುಂಭಾಗ ಕೂತಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಜೈಕಾರ ಕೇಳಿಬಂತು.

ಪ್ರಜಾಧ್ವನಿ ಸಮಾವೇಶದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಮಾಜಿ ಶಾಸಕ ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ದಲ್ಲಿ ಮಾ.13ರಂದು ತಾಮ್ರದ ಛಾವಣಿ ಸಮರ್ಪಣೆ : ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜನೆ

Next Post

Adulterated Coffee Powder | ಕಾಫಿ ಪುಡಿಗೆ ಚಿಕೋರಿ ಕಲಬೆರೆಕೆಯಿಂದ‌ ಆರೋಗ್ಯ ಸಮಸ್ಯೆ : ಚಿಕೋರಿ ನಿಷೇಧಕ್ಕೆ ಆಗ್ರಹ

Next Post

Adulterated Coffee Powder | ಕಾಫಿ ಪುಡಿಗೆ ಚಿಕೋರಿ ಕಲಬೆರೆಕೆಯಿಂದ‌ ಆರೋಗ್ಯ ಸಮಸ್ಯೆ : ಚಿಕೋರಿ ನಿಷೇಧಕ್ಕೆ ಆಗ್ರಹ

BW Special| State Eco Tourism | ಕರಾವಳಿಯ ಮ್ಯಾಂಗ್ರೋವ್ ಕಾಡಿನ ಮಧ್ಯೆ ಸೀತಾನದಿ ಹಿನ್ನೀರಿನಲ್ಲಿ ಕಯಾಕಿಂಗ್ ಜಲ ವಿಹಾರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group